

ಬೀದರ್: ನಗರದ ಎಂ.ಎಚ್. ರವೀಂದ್ರ ಅವರನ್ನು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಸಾಮಾಜಿಕ ಜಾಲತಾಣ ವಿಭಾಗದ ಬೀದರ್ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಆರ್. ಧರ್ಮಸೇನ್ ಅವರು ವಿಭಾಗದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ.ಕೆ. ಅವರ ಅನುಮೋದನೆ ಮೇರೆಗೆ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕೂಡಲೇ ತಮ್ಮ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಸಂಘಟನೆ ಬಲವರ್ಧನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.