

ಹಗರಿಬೊಮ್ಮನಹಳ್ಳಿ: ಸಮಾಜದಲ್ಲಿ ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಸೌಲಭ್ಯಗಳು ದೊರೆಯಬೇಕು ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ಹೇಳಿದರು.
ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಎಸ್ಸಿ ಫಲಾನುಭವಿಗಳಿಗೆ ಮೋಟಾರ್ ಪಂಪ್‌ಸೆಟ್ ವಿತರಣೆ ಮಾಡಿ ಸೋಮವಾರ ಮಾತನಾಡಿದರು. ರಾಜ್ಯದ ಜನರನ್ನು ಗ್ಯಾರಂಟಿ ಯೋಜನೆಗಳಿಂದ ಸಮಾಧಾನ ಪಡಿಸಿದರೆ ಸಾಲದು. ರೈತರಿಗೆ ಉತ್ತಮ ಬಿತ್ತನೆಬೀಜ, ಕಾಲಕಾಲಕ್ಕೆ ರಸಗೊಬ್ಬರ, ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಯೋಜನೆ ನೀಡಬೇಕು ಎಂದು ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ರಸಗೊಬ್ಬರ ಕೊರತೆಯಾಗದಂತೆ ನಿಗವಹಿಸಬೇಕು. ಕಾಳಸಂತೆಯಲ್ಲಿ ರಸಗೊಬ್ಬರ ಮಾರಿದರೆ ಶಿಕ್ಷೆ ವಿಧಿಸುವುದರೊಂದಿ ಅಂಗಡಿಯ ಪರವಾನಗಿ ರದ್ದುಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ತಲಾ 3.5 ಲಕ್ಷ ರೂ. ವೆಚ್ಚದಲ್ಲಿ 40 ಜನ ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಮೋಟಾರ್ ಪಂಪ್‌ಸೆಟ್ ವಿತರಿಸಲಾಗಿದೆ. ಮೋಟಾರು ಪಂಪ್‌ಸೆಟ್‌ಗಳನ್ನು ರೈತರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸ್ಥಿತಿವಂತರಾಗುವಂತೆ ಶಾಸಕ ನೇಮಿರಾಜ್ ನಾಯ್ಕ ತಿಳಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ ಶೆಟ್ರು, ಉಲುವತ್ತಿ ವಿಎಸ್‌ಎಸ್‌ಎನ್ ಅಧ್ಯಕ್ಷ ಕನ್ನಿಹಳ್ಳಿ ಚಂದ್ರಶೇಖರ, ಪ್ರಮುಖರಾದ ಮರಿಯಪ್ಪ, ಆಪ್ತ ಸಹಾಯಕ ಬ್ಯಾಟಿ ನಾಗರಾಜ, ಪ್ರಮುಖರಾದ ಪಾಂಡುನಾಯ್ಕ, ಹೋಟೆಲ್ ಸಿದ್ದರಾಜು, ಪಾಂಡುರಂಗ ನಾಯ್ಕ, ಕಹಳೆ ಬಸವರಾಜ್, ಉಪ್ಪಾರ ಕನಕಪ್ಪ, ಮಹೇಂದ್ರ ನಾಯ್ಕ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಅರುಣ್ ಕುಮಾರ್ ಮತ್ತಿತರರು ಇದ್ದರು.