ಬಳ್ಳಾರಿ : ಇಲ್ಲಿನ ಸುಧಾಕ್ರಾಸ್ ವೃತ್ತದಲ್ಲಿನ ರಸ್ತೆ ಅಗಲೀಕರಣಕ್ಕಾಗಿ ಎರಡು ಬದಿಯಲ್ಲಿ ಬೃಹತ್ ಗಾಗಿ ಬೆಳೆದಿದ್ದ ಮರಗಳನ್ನು ಕತ್ತರಿಸಲಾಗಿದೆ. ಇದರ ಜತೆಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾರ್ಯ ನಡೆಯಿತು. ಕೆಲ ದಿನಗಳ ಹಿಂದೆ ಡಿಸಿ ಪ್ರಶಾಂತ ಕುಮಾರ ಮಿಶ್ರಾ ವೃತ್ತದ ರಸ್ತೆ ಬಳಿ ಗಿಡ_ ಮರ ಮತ್ತು ವಿದ್ಯುತ್ ಕಂಬ ತೆರವುಗೊಳಿಸುವುದಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದರು. ಆದರೆ, ಬೃಹತ್ ಆಕಾರದ ಮರಗಳನ್ನು ಕಡಿದದ್ದರಿಂದ ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯ ನಿವಾಸಿಗಳ ವಿರುದ್ಧ ಅಕ್ರೋಶ ಹೊರ ಹಾಕಿದರು.