ರಸ್ತೆ ಅಪಘಾತದಲ್ಲಿ 12 ಜನರಿಗೆ ಗಾಯ

IMG-20250113-WA0202
Published on

ಹಿರೀಸಾವೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಲಾರಿಗಳ ನಡುವೆ ಅಪಘಾತ ನಡೆದಿದ್ದು 12ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರು ಕಡೆ ಹೋಗುವ ಮಾರ್ಗದಲ್ಲಿ ಮೇಟಿಕೆರೆ ಗೇಟ್ ಸಮೀಪ ಚಕ್ರ ಸಿಡಿದು ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕ್ಯಾಂಟರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದೇ ಸಮಯದಲ್ಲಿ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಸಂಚಾರ ಮಾಡುತ್ತಿದ್ದ ಬಸ್ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ.

ಬಸ್‌ನಲ್ಲಿದ್ದ 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಹಿರೀಸಾವೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗೆ ಹಾಸನ ಮತ್ತಿತರ ಆಸ್ಪತ್ರೆಗಳಿಗೆ ಗಾಯಾಳುಗಳು ತೆರಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net