ರಸ್ತೆ ಅಪಘಾತದಲ್ಲಿ ಇಬ್ಬರ ಸಾವು

accident-15
Published on

ಚಿತ್ರದುರ್ಗ: ರಾಷ್ಟ್ರಿಯ ಹೆದ್ದಾರಿ 50ರ ಚಿತ್ರದುರ್ಗ ತಾಲೂಕು ಚಿಕ್ಕಗೊಂಡನಹಳ್ಳಿ ಬಳಿ ಬುಧವಾರ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಅಸು ನೀಗಿದ್ದಾರೆ. ಚಿತ್ರದುರ್ಗದಿಂದ ಜಗಳೂರಿಗೆ ತೆರಳುತ್ತಿದ್ದ ಕಾರು ಹೊಸಪೇಟೆಗೆ ಕಡೆಗೆ ಸಾಗುತ್ತಿದ್ದ ವಾಹನವೊಂದಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಫಯಾಜ್ (30), ಜಹೀರ್‌ವುಲ್ಲಾ ಖಾನ್(23) ಮೃತಪಟ್ಟಿದ್ದಾರೆ.
ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಶಾಹಿದ್‌ಖಾನ್‌ನನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ, ಡಿವೈಎಸ್‌ಪಿ ಪಿ.ಕೆ.ದಿನಕರ್ ಭೇಟಿ ನೀಡಿದ್ದರು. ತುರುವನೂರು ಠಾಣೆ ಪಿಐ ಲತಾ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net