ರಸ್ತೆ ಅಪಘಾತದಲ್ಲಿ ಇಬ್ಬರ ಸಾವು

Two killed in road accident
Two killed in road accident
Published on

ಬಾಗಲಕೋಟೆ : ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಗುರುವಾರ ರಾತ್ರಿ ಲಾರಿ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ವಡವಟ್ಟಿ ಗ್ರಾಮದ ನವೀನ್ ಕುಂಬಾರ (22), ರಾಮಪ್ಪ ಕಂಬಳಿ (25) ಮೃತ ದುರ್ದೈವಿಗಳು. ಕೆರೂರ ಪೊಲೀಸರು ಸ್ಥಳಕ್ಕೆ ಧಾವಿಸಿ, ತನಿಖೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net