ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

03rajesh3
Published on

ಚಾಮರಾಜನಗರ: ಗ್ರಾಮೀಣ ರಸ್ತೆಗಳು ಮತ್ತು ಸಂಪರ್ಕ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರಸ್ತೆಗಳು ಗ್ರಾಮೀಣ ಅಭಿವೃದ್ದಿಯ ಪ್ರತೀಕವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ತಾಲೂಕಿನ ಬೇಡರಪುರ ಕ್ರಾಸ್ ನಿಂದ ಬೆಂಡರವಾಡಿ ಗ್ರಾಮಗಳ ಆಯ್ದ ಭಾಗದ ಸಂಪರ್ಕ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ ಅಂದಾಜು 2 ಕೋಟಿ ರೂ, ವೆಚ್ಚದಲ್ಲಿ ಆಯ್ದ ಭಾಗಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದು, ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ಸಮುದಾಯ ಭವನ ಇನ್ನಿತರೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿವಿಧ ಯೋಜನೆಗಳಡಿ ಅನುದಾನ ಮಂಜೂರು ಮಾಡಿಸಿ, ಸಿಸಿ ರಸ್ತೆ, ಚರಂಡಿಗಳನ್ನು ನಿರ್ಮಿಸಲಾಗುತ್ತಿದೆ. ಗುತ್ತಿಗೆದಾರರು ಕಾಮಗಾರಿ ನಿರ್ಮಾಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇಶ್, ಸದಸ್ಯರಾದ ಮಹದೇವಸ್ವಾಮಿ, ಮಲ್ಲು, ಚಂದ್ರು, ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್, ಮುಖಂಡರಾದ ಮಲ್ಲಪ್ಪ, ಶಿವಮಲ್ಲು, ನಾರಾಯಣ್, ಮಲ್ಲೇಶ್, ಶಿವರಾಜು, ಎಸ್‌ಪಿಕೆ ಉಮೇಶ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net