

ಗುಂಡ್ಲುಪೇಟೆ: ದಿನದಿಂದ ದಿನಕ್ಕೆ ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಪ್ರವಾಸಿಗರ ಸುಗಮ ಸಂಚಾರಕ್ಕಾಗಿ ಬೆಟ್ಟದ ತಪ್ಪಲಿನಿಂದ ದೇವಾಲಯದವರೆಗೆ 3 ಕೋಟಿ ರೂ. ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಸದ್ಯ ಕಾಂಗ್ರೆಸ್ ಸರ್ಕಾರ ತಾನು ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸುತ್ತಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಚಾಮುಲ್ ನಿರ್ದೇಶಕ ಎಚ್.ಎಂ.ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣಭಟ್, ಮುಖಂಡರಾದ ಎಸ್.ಪ್ರಭುಸ್ವಾಮಿ, ಜಿ.ಕೆ.ಲೋಕೇಶ್, ಕುಮಾರ್, ಗುರು ವೀರನಪುರ ಸೇರಿದಂತೆ ಹಲವರು ಇದ್ದರು.