ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಚಾಲನೆ

IMG-20250418-WA0275
Published on

ಸಾಲಿಗ್ರಾಮ: ಲಕ್ಷ್ಮೀಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್‌ವೈ ಯೋಜನೆ ಅಡಿ ಸುಮಾರು ನಾಲ್ಕೂವರೆ ಕೋಟಿ ರೂ. ವೆಚ್ಚದ ಕಾಮಗಾರಿಗೆ ಶೀಘ್ರದಲ್ಲೇ ಭೂಮಿಪೂಜೆ ಮಾಡಲಾಗುವುದು ಎಂದು ಶಾಸಕ ಡಿ.ರವಿಶಂಕರ್ ತಿಳಿಸಿದರು.

ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ 50 ಲಕ್ಷ ರೂ.ವೆಚ್ಚದ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಚಿಕ್ಕನಾಯಕನಹಳ್ಳಿಯಿಂದ ಲಕ್ಷ್ಮೀಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮುಂದುವರಿದ ರಸ್ತೆಗಳ ಅಭಿವೃದ್ಧಿಗೆ ಒಂದು ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಸೇರಿದಂತೆ ಗ್ರಾಮದಲ್ಲಿ ಹಲವು ವರ್ಷಗಳಿಂದ ರಸ್ತೆ, ಚರಂಡಿ ಇನ್ನಿತರ ಮೂಲ ಸೌಕರ್ಯಗಳು ಇಲ್ಲದೆ ಜನರು ಹಲವು ಬಾರಿ ನನ್ನ ಗಮನಕ್ಕೆ ತಂದಿದ್ದರು. ಆ ನಿಟ್ಟಿನಲ್ಲಿ ಮೊದಲು ರಸ್ತೆ, ಚರಂಡಿಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಉಳಿದ ಕಾಮಗಾರಿಗಳನ್ನು ಹಂತ ಹಂತವಾಗಿ ಮಾಡಿಸಲಾಗುವುದು ಎಂದರು.

ಗ್ರಾಮದ ಹೊಸ ಬಡಾವಣೆಗೆ ನೀರು, ವಿದ್ಯುತ್, ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು. ಗ್ರಾಮದ ಅಲ್ಪಸಂಖ್ಯಾತರ ಹಲವು ದಿನದ ಬೇಡಿಕೆಯಾಗಿರುವ ಖಬರಸ್ತಾನ್‌ಗೆ ಕಾಂಪೌಂಡ್ ನಿರ್ಮಾಣ ಮಾಡಿಕೊಡಲಾಗುವುದು. ಲಪುರ ಗ್ರಾಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಮೂಲಕ ಮಾದರಿ ಗ್ರಾಮದ ನಿರ್ಮಾಣಕ್ಕೆ ಶ್ರಮಿಸಲಾಗುವುದು ಎಂದರು.

ಲಕ್ಷ್ಮೀಪುರ ನಿಮ್ಮ ಆಶೀರ್ವಾದದಿಂದ ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದೆ. ಅದನ್ನು ಯಾವತ್ತೂ ನಾನು ಮರೆಯುವುದಿಲ್ಲ ಹಾಗಾಗಿ ಈ ಗ್ರಾಮ ಅಭಿವೃದ್ಧಿ ಮಾಡುವುದು ನನ್ನ ದೊಡ್ಡ ಜವಾಬ್ದಾರಿಯಾಗಿದೆ. ಎಲ್ಲ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಎಂದರೆ ಕಷ್ಟವಾಗುತ್ತದೆ. ಇತರ ಗ್ರಾಮಗಳ ಅಭಿವೃದ್ಧಿಯನ್ನೂ ನಾನು ಮಾಡಬೇಕು ಅಲ್ಲವೇ. ದಯವಿಟ್ಟು ಸಹಕರಿಸಿ ನಿಮ್ಮೆಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಉದಯಶಂಕರ್, ತಾಪಂ ಮಾಜಿ ಸದಸ್ಯ ಎಲ್.ಎಂ.ಸಣ್ಣಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಕೆಡಗ ನಟರಾಜ್, ಗ್ರಾಪಂ ಅಧ್ಯಕ್ಷೆ ಮಣಿಲಾ ಮಂಜುನಾಥ್, ಮಾಜಿ ಅಧ್ಯಕ್ಷ ಹುಚ್ಚೇಗೌಡ, ಸದಸ್ಯ ನಾಗೇಂದ್ರ, ಮುಖಂಡರಾದ ಬಿರೇಶ್, ರಮೇಶ್, ಗೌಡಪ್ಪ, ನಟರಾಜ್, ದೇವರಾಜು, ಶಿವಣ್ಣ, ಕೀರ್ತಿ, ಮಹೇಶ್, ಮಂಜು, ರಾಮೇಗೌಡ, ರವಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀಕಂಠಮೂರ್ತಿ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net