ರಸ್ತೆ ಕಾಮಗಾರಿ ಪೂರ್ಣಗೊಳಿಸಿ

11-08-Shiva-5
ಸ್ಥಗಿತಗೊಳಿಸಲಾಗಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಶ್ರೀನಿವಾಸಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು. ವೇದಿಕೆ ಜಿಲ್ಲಾಧ್ಯಕ್ಷ ವಿನೋದರೆಡ್ಡಿ, ಪದಾಕಾರಿಗಳಾದ ಕೊಂಡಪ್ಪ, ನರೇಶ, ಸಿದ್ದಪ್ಪ, ಲಕ್ಷ್ಮಣ, ಈರಣ್ಣ, ವಿನೋದ ಇದ್ದರು.
Published on

ರಾಯಚೂರು: ನಗರದ ಬಸವನಬಾವಿ ವೃತ್ತದಿಂದ ನರಸಿಂಹ ರೈಸ್‌ಮಿಲ್‌ವರೆಗಿನ ರಸ್ತೆ ಕಾಮಗಾರಿಯನ್ನು ಅರ್ಧದಲ್ಲಿ ನಿಲ್ಲಿಸಲಾಗಿದ್ದು, ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ವೇದಿಕೆ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಶ್ರೀನಿವಾಸಗೆ ಶುಕ್ರವಾರ ಮನವಿ ಸಲ್ಲಿಸಿ, ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದರಿಂದ ನಿವಾಸಿಗಳು ಧೂಳಿನಲ್ಲಿ ನಿತ್ಯ ಸಂಚರಿಸುವಂತಾಗಿದ್ದು, ವಾಹನ ಸವಾರರು ಸಮಸ್ಯೆ ಎದುರಿಸುವಂತಾಗಿದೆ ಎಂದು ದೂರಿದರು.
ಕಾಮಗಾರಿ ಆರಂಭಿಸಿ ಹಲವು ವರ್ಷಗಳಾಗಿದ್ದರೂ ಇದುವರೆಗೂ ಪೂರ್ಣಗೊಳಿಸಲಾಗಿಲ್ಲ. ಚುನಾವಣೆ ನೀತಿ ಸಂಹಿತೆ ನೆಪದಲ್ಲಿ ಸ್ಥಗಿತಗೊಳಿಸಲಾದ ಕಾಮಗಾರಿಯನ್ನು ಚುನಾವಣೆ ಮುಗಿದು 3 ತಿಂಗಳಾದರೂ ಆರಂಭಿಸಿಲ್ಲ. ಇದರಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.
ನಿಯೋಗದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ವಿನೋದರೆಡ್ಡಿ, ಪದಾಕಾರಿಗಳಾದ ಕೊಂಡಪ್ಪ, ನರೇಶ, ಸಿದ್ದಪ್ಪ, ಲಕ್ಷ್ಮಣ, ಈರಣ್ಣ, ವಿನೋದ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net