ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರರಿಗೆ ಗಾಯ

7
Published on

ಹೊಸಕೋಟೆ: ಒಳಚರಂಡಿ ಕಾಮಗಾರಿ ಕಳಪೆಯಿಂದಾಗಿ ನಗರದ ಕೆ.ಆರ್.ರಸ್ತೆ ಮಧ್ಯದಲ್ಲಿ ಬಿದ್ದಿರುವ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ.

ರಸ್ತೆಲ್ಲಿನ ಗುಂಡಿ ಕಾಣದೆ ಶನಿವಾರ, ಭಾನುವಾರ ಸುಮಾರು 13 ಮಂದಿ ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ, ಅದರಲ್ಲಿ ಕೆಲವರು ತೀವ್ರಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕೂಡಲೆ ನಗರಸಭೆ ಅಧಿಕಾರಿಗಳು ಗುಂಡಿ ಮುಚ್ಚಿಸಿ ಮುಂದಾಗುವ ಅನಾಹುತ ತಪ್ಪಿಸಬೇಕು ಎಂದು ಸ್ಥಳೀಯ ಕೃಷ್ಣ ಮೂರ್ತಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net