ರಸ್ತೆ, ಚರಂಡಿ ಕಾಮಗಾರಿಗೆ ಶಾಸಕರಿಂದ ಚಾಲನೆ

ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ನಿರಂಜನಕುಮಾರ್ ಭೂಮಿಪೂಜೆ ನೆರವೇರಿಸಿದರು. ಬಗರ್ ಹುಕುಂ ಸಮಿತಿಯ ಉಪಾಧ್ಯಕ್ಷ ನಿಟ್ರೆ ನಾಗರಾಜಪ್ಪ, ಎಪಿಎಂಸಿ ಅಧ್ಯಕ್ಷ ರವಿ, ಮುಖಂಡರಾದ ಜಯರಾಜ್, ಹೊರೆಯಾಲ ಕೃಷ್ಣ ಇತರರು ಇದ್ದರು.
IMG-20221215-WA0096
Published on

ಗುಂಡ್ಲುಪೇಟೆ: ತಾಲೂಕಿನ ವಿವಿಧ ಗ್ರಾಮಗಳ ಪರಿಶಿಷ್ಟ ಪಂಗಡದ ಬೀದಿಯಲ್ಲಿ ಸಿಸಿ ರಸ್ತೆ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಎಸ್.ನಿರಂಜನಕುಮಾರ್ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.


ಯಡವನಹಳ್ಳಿ ಗ್ರಾಮದಲ್ಲಿ 30 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ, 10 ಲಕ್ಷ ರೂ. ವೆಚ್ಚದಲ್ಲಿ ಅಮ್ಮನವರ ದೇವಸ್ಥಾನ ಮತ್ತು ಹರಿಹರೇಶ್ವರ ದೇವಸ್ಥಾನ ಅಭಿವೃದ್ಧಿ ಕಾಮಗಾರಿ, ಕಲ್ಲೀಗೌಡನಹಳ್ಳಿ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ, ಮೇಲುಕಮನಹಳ್ಳಿಯ ಪರಿಶಿಷ್ಟ ಜಾತಿಯ ಬಡಾವಣೆಯಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.


ಬಗರ್ ಹುಕುಂ ಸಮಿತಿ ಉಪಾಧ್ಯಕ್ಷ ನಿಟ್ರೆ ನಾಗರಾಜಪ್ಪ, ಎಪಿಎಂಸಿ ಅಧ್ಯಕ್ಷ ರವಿ, ಮುಖಂಡರಾದ ಜಯರಾಜ್, ಹೊರೆಯಾಲ ಕೃಷ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net