

ಕೆ.ಎಂ.ದೊಡ್ಡಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಎಸ್‌ಸಿಎಸ್‌ಪಿ /ಟಿಎಸ್‌ಪಿ ಯೋಜನೆಗಳನ್ನು ಸಮರ್ಪಕವಾಗಿ ವಿನಿಯೋಗಿಸಬೇಕು ಎಂದು ಶಾಸಕ ಕದಲೂರು ಉದಯ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸಮೀಪದ ಚಿಕ್ಕರಸಿನಕೆರೆ ಗ್ರಾಮದ ಪರಿಶಿಷ್ಟ ಕಾಲನಿಯ ಎಸ್‌ಸಿಎಸ್‌ಪಿ ಯೋಜನೆಯಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ. ಅರ್ಹರಿಗೆ ಸವಲತ್ತು ತಲುಪಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಜಿಪಂ ಮಾಜಿ ಅಧ್ಯಕ್ಷ ಬಿ.ಬಸವರಾಜು, ಮಾಜಿ ಸದಸ್ಯ ಎ.ಎಸ್.ರಾಜೀವ್, ಗ್ರಾಪಂ ಅಧ್ಯಕ್ಷ ಕದಲೂರು ತಿಮ್ಮೇಗೌಡ, ಕೆಪಿಸಿಸಿ ಸದಸ್ಯ ಚಿದಂಬರ ಮೂರ್ತಿ, ಮುಖಂಡರಾದ ಅಮೀನ್ ಶಿವಲಿಂಗಯ್ಯ, ಕೆ.ಶಿವಲಿಂಗಯ್ಯ (ಜಾಣಪ್ಪ), ಪೂಜಾರಿ ಸಿದ್ದರಾಜು, ರಾಜೇಶ್, ತಾಪಂ ಇಒ ಸಂದೀಪ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ನಾಗಲಕ್ಷ್ಮಮ್ಮ ಇತರರಿದ್ದರು.