ರಸ್ತೆ ದುರಸ್ತಿಗೆ ಕಾಕೋಳ ಗ್ರಾಮಸ್ಥರ ಆಗ್ರಹ

13-RNR-03
Published on

ರಾಣೆಬೆನ್ನೂರ: ಕಾಕೋಳ-ಬುಡಪನಹಳ್ಳಿ ಗ್ರಾಮದ ರಸ್ತೆ ದುರಸ್ತಿ ಪಡಿಸಲು ಆಗ್ರಹಿಸಿ ಕಾಕೋಳ ಗ್ರಾಮಸ್ಥರು ಗುರುವಾರ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳ ಬಳಿ ನಿಂತು ಪ್ರತಿಭಟನೆ ನಡೆಸಿದರು. ಮಳೆಯಿಂದಾಗಿ ಕಾಕೋಳ-ಬುಡಪನಹಳ್ಳಿ ರಸ್ತೆ ಸಂಪೂರ್ಣ ಹಾಳಾಗಿದೆ. ಇದರಿಂದಾಗಿ ಎರಡೂ ಗ್ರಾಮಗಳ ಜನತೆ ಒಂದೆಡೆಯಿಂದ ಮತ್ತೊಂದೆಡೆಗೆ ಹೋಗಬೇಕಾದರೆ ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ವಣವಾಗಿದೆ. ರಸ್ತೆ ದುರಸ್ತಿಪಡಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಸ್ಥಳೀಯ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ರಸ್ತೆ ದುರಸ್ತಿ ಪಡಿಸಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರಮುಖರಾದ ಪ್ರಕಾಶ ಲಮಾಣಿ, ರಮೇಶ ಕೂನಬೇವು, ಚೇತನ ಕುಮಾರ, ರಮೇಶ ಲಮಾಣಿ, ಹೇಮಂತ ಲಮಾಣಿ, ಶಂಕ್ರಪ್ಪ ಲಮಾಣಿ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net