ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಕಾರು

5
Published on

ದೊಡ್ಡಬಳ್ಳಾಪುರ: ಯಲಹಂಕ ಕಡೆಯಿಂದ ಭಾನುವಾರ ಬೆಳಗ್ಗೆ ಬಂದ ಕಾರು ಸಿದ್ದೇನಾಯಕನಹಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನ ಮುಂಭಾಗ ಜಖಂಗೊಂಡಿದೆ. ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿಯ ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯ ಸಿದ್ದೇನಾಯಕನಹಳ್ಳಿ ಬಳಿ ಇರುವ ತಿರುವು ಬಳಿ ಸೂಚನಾ ಫಲಕಗಳಿಲ್ಲ. ಟೋಲ್ ರಸ್ತೆಯಾದ ಕಾರಣ ವೇಗವಾಗಿ ಬರುವ ವಾಹನಗಳು ಏಕಾಏಕಿ ಎದುರಾಗುವ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೆ ಕಾರಣವಾಗುತ್ತಿದೆ. ದೊಡ್ಡಬಳ್ಳಾಪುರ ನಗರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net