

ಸಿದ್ದಾಪುರ: ನಿರಂತರ ಮಳೆಯಿಂದಾಗಿ ಅಮ್ಮತ್ತಿ ಹೋಬಳಿಯ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸ್ಥಳೀಯರು ಬದಲಿ ರಸ್ತೆಯಲ್ಲಿ ಸಂಚಾರಿಸುವಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಿದೆ. ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಸ್ಥಳಕ್ಕೆ ಧಾವಿಸಿಪರಿಶೀಲನೆ ನಡೆಸಿದ್ದು, ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಆ ಭಾಗದ ಜನರಿಗೆ ಕಾಳಜಿ ಕೇಂದ್ರಕ್ಕೆ ತೆರಳಲು ತಿಳಿಸಿದ್ದಾರೆ.