ರಸ್ತೆಗಳ ಡಾಂಬರೀಕರಣಕ್ಕೆ 60 ಕೋಟಿ ರೂ. ಬಿಡುಗಡೆ

1
Published on

ಮೈಸೂರು: ವಿಜಯನಗರ 3ನೇ ಹಂತ ವ್ಯಾಪ್ತಿಯಲ್ಲಿ ಬರುವ ಎಲ್ಲ ರಸ್ತೆಗಳ ಡಾಂಬರೀಕರಣ ಮಾಡಲು 60 ಕೋಟಿ ರೂ. ಬಿಡುಗಡೆಯಾಗಿದೆ. ಅದೇ ರೀತಿ ವಿಜಯನಗರ 4ನೇ ಹಂತಕ್ಕೂ 60 ಕೋಟಿ ರೂ. ಮಂಜೂರಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.


ವಿಜಯನಗರ 3ನೇ ಹಂತದಲ್ಲಿ ಕೈಗೊಂಡಿರುವ 60 ಕೋಟಿ ರೂ. ವೆಚ್ಚದ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ, ಮುಡಾದಲ್ಲಿ ನಿಧಿ ಒಂದು ಮತ್ತು ನಿಧಿ ಎರಡು ಹಂತ ಎಂದು ವರ್ಗೀಕರಣ ಮಾಡಿದ್ದಲ್ಲದೆ, ಕಾಮಗಾರಿಯನ್ನು ಕೈಗೆತ್ತಿಕೊಳ್ಳದಂತೆ ಸರ್ಕಾರ ಸೂಚನೆ ನೀಡಿತ್ತು.

ಇದರಿಂದಾಗಿ ಮೂರು ವರ್ಷಗಳ ಕಾಲ ಯಾವುದೇ ಕಾಮಗಾರಿಯನ್ನೂ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ನಂತರ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟ ಮೇಲೆ ಅನುದಾನ ಬಿಡುಗಡೆಯಾಗಿದ್ದು, ಮುಡಾ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಕೆಲಸ ಆರಂಭಿಸಲಾಗಿದೆ ಎಂದು ತಿಳಿಸಿದರು.


ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ, ಮುಡಾ ಅಧೀಕ್ಷಕ ಇಂಜಿನಿಯರ್ ಚನ್ನಕೇಶವಯ್ಯ, ಮುಖಂಡರಾದ ಮಂಜುನಾಥ್, ರವಿಕುಮಾರ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net