ರಸ್ತೆಗಳ ವಿಸ್ತರಣೆಗೆ ಕ್ರಮ

CTD RASTE AGALIKARANA MARIKING--00002
Published on

ಚಿತ್ರದುರ್ಗ: ನಗರದಲ್ಲಿ ರಸ್ತೆ ವಿಸ್ತರಣೆಗೆ ನಿರ್ಧರಿಸಲಾಗಿದೆ ಎಂದು ಶಾಸಕ ಕೆ.ಸಿ. ವೀರೇಂದ್ರಪಪ್ಪಿ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ನೇತೃತ್ವದಲ್ಲಿ ಸೋಮವಾರ ನಗರಸಭೆ ಅಧ್ಯಕ್ಷರು, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಆಯುಕ್ತೆ ಎಂ. ರೇಣುಕಾ, ತಾಪಂ ಇಒ ರವಿಕುಮಾರ್ ಮತ್ತಿತರ ಅಧಿಕಾರಿಗಳೊಂದಿಗೆ ನಡೆಸಿದ ಸಮಾಲೋಚನೆ ಬಳಿಕ ಮಂಗಳವಾರದಿಂದಲೇ ರಸ್ತೆ ವಿಸ್ತರಣೆಗೆ ಸಂಬಂಧಿಸಿದಂತೆ ಮಾರ್ಕಿಂಗ್ ಆರಂಭವಾಗಿದೆ ಎಂದು ಶಾಸಕರು ಪತ್ರಿಕೆಗೆ ತಿಳಿಸಿದ್ದಾರೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ರಸ್ತೆ ಮತ್ತಿತರ ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಎನ್‌ಫೋರ್ಸ್‌ಮೆಂಟ್ ಆಫೀಸರ್ ಒಬ್ಬರನ್ನು ನೇಮಿಸಲಾಗುವುದು. ಈ ಅಧಿಕಾರಿ ನೇತೃತ್ವದಲ್ಲಿ ಸಮೀಕ್ಷೆ ನಡೆಸಿ, ಒತ್ತುವರಿ ನಿಧ್ಯಾಕ್ಷಿಣ್ಯವಾಗಿ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಚಿತ್ರದುರ್ಗ ನಗರದ ಚಳ್ಳಕೆರೆ ವೃತ್ತದಿಂದ ಕನಕ ಸರ್ಕಲ್‌ವರೆಗೆ ರಸ್ತೆ ಮಧ್ಯಭಾಗದಿಂದ 21 ಮೀಟರ್ ರಸ್ತೆ ಅಗಲೀಕರಣಕ್ಕೆ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಸ್ತೆ ವಿಸ್ತರಣೆ ಕಾರ್ಯ ಚುರುಕಾಗಿ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮತ್ತು ಸರ್ಕಾರಿ ಆದೇಶಗಳನ್ನು ಪರಿಶೀಲಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net