ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಚಿತ್ರ 10ಎಸ್ ಡಿ ಪಿ 01
ರಸ್ತೆಗೆ ಅಡ್ಡಲಾಗಿ ಬಿದ್ದ ಮರ
Published on

ಸಿದ್ದಾಪುರ: ಸಮೀಪದ ಅಬ್ಯಾಲದಲ್ಲಿ ಗುರುವಾರ ರಸ್ತೆಗೆ ಅಡ್ಡಲಾಗಿ ಮರ ಬಿದ್ದು, ಕೆಲಕಾಲ ಸಂಚಾರಕ್ಕೆ ತೊಡಕುವುಂಟಾಗಿತ್ತು. ಹೀಗಾಗಿ ರಸ್ತೆಯಲ್ಲೇ ವಾಹನಗಳು ಸರತಿ ಸಾಲಿನಲ್ಲಿ ನಿಂತ್ತಿದ್ದವು. ಅಲ್ಲದೆ ಕಿರಿದಾದ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡಿದರು. ಬಳಿಕ ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿದರು. ಸಿದ್ದಾಪುರ-ಚೆಟ್ಟಳ್ಳಿ-ಮಡಿಕೇರಿ ಸಂಪರ್ಕ ಕಲ್ಪಿಸುವ ಅಬ್ಯಾಲದಲ್ಲಿ ರಸ್ತೆ ಬದಿಯಲ್ಲೇ ಬೃಹತ್ ಮರಗಳು ನಿಂತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ರಸ್ತೆ ಬದಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net