ರಸ್ತೆಯಲ್ಲಿ ಅಡ್ಡಗಟ್ಟಿ ಚಿನ್ನಾಭರಣ ದೋಚುತ್ತಿದ್ದ ಯುವಕ ಬಂಧನ

Crime Logo
Published on

ಹಾಸನ : ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರನ್ನು ಅಡ್ಡಗಟ್ಟಿ ಚಿನ್ನಾಭರಣ ದೋಚುತ್ತಿದ್ದ ದರೋಡೆಕೋರರ ಗುಂಪಿನಲ್ಲಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಪರಾರಿಯಾಗಿದ್ದಾರೆ.
ದಾಸರಕೊಪ್ಪಲು ನಿವಾಸಿ ಅಭಿಲಾಷ್ (19) ಬಂಧಿತ ಆರೋಪಿ. ನಗರದ 80 ಅಡಿ ರಸ್ತೆಯ ನಯಾರಾ ಪೆಟ್ರೋಲ್ ಬಂಕ್ ಸಮೀಪ ಮಂಗಳವಾರ ರಾತ್ರಿ 5 ಜನರು ಮಚ್ಚು ಮತ್ತು ಕಬ್ಬಿಣದ ರಾಡ್‌ಗಳನ್ನು ಹಿಡಿದು ರಸ್ತೆಯಲ್ಲಿ ಓಡಾಡುವ ಜನರನ್ನು ಅಡ್ಡಗಟ್ಟಿ ಹಣ ಮತ್ತು ಚಿನ್ನಾಭರಣ ದೋಚುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, ನಾಲ್ವರು ತಪ್ಪಿಸಿಕೊಂಡಿದ್ದಾರೆ. ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net