ರಾಗಿ ಮಾರಿದ್ದ ರೈತರಿಗೆ ಬಾರದ ಹಣ-  ಪಾವತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

IMG-20230901-WA0044.jpg
Published on

ದಾವಣಗೆರೆ: ದಾವಣಗೆರೆ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ್ದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಗೃಹಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನತಾದರ್ಶನದಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ನೇತೃತ್ವದಲ್ಲಿ ತೆರಳಿದ್ದ ದಾವಣಗೆರೆ ತಾಲೂಕು, ಮಾಯಕೊಂಡ ರೈತ ಮುಖಂಡರು, ರಾಗಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿದ್ದ ರಾಗಿಯ ಹಣ ಬಿಡುಗಡೆಗೆ ಕೋರಿದರು.

ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ ಈ ಬಾರಿ ಮುಂಗಾರು ಮಳೆ ಇಲ್ಲದೆ ಬೆಳೆಗಳು ಒಣಗಿ ರೈತರು ತತ್ತರಿಸಿದ್ದಾರೆ. ಕಳೆದ ವರ್ಷ ಬೆಳೆದ ರಾಗಿಯನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಿದ ರೈತರಿಗೆ ಬಾಕಿ ಹಣ ನೀಡಿಲ್ಲ. ಈ ವರ್ಷ ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆ ಹಾನಿಗೆ ಒಳಗಾಗಿ ಸಾಲಗಾರರಾದ ರೈತರು ಕಂಗಾಲಾಗಿದ್ದಾರೆ. ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಮನವರಿಕೆ ಮಾಡಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಗಿ ಖರೀದಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿ ರೈತರ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಆದೇಶಿಸಿದರು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಪತ್ರಿಕೆಗೆ ತಿಳಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net