ರಾಗಿಬೊಮ್ಮನಹಳ್ಳಿ ಡೇರಿಗೆ ಆಯ್ಕೆ

28 mlv 1
Published on

ಮಳವಳ್ಳಿ: ತಾಲೂಕಿನ ರಾಗಿಬೊಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ನಿಂಗರಾಜು, ಉಪಾಧ್ಯಕ್ಷರಾಗಿ ಸುಶೀಲ ಅವಿರೋಧವಾಗಿ ಆಯ್ಕೆಯಾದರು. ಆಡಳಿತ ಮಂಡಳಿಯ ನಿರ್ದೇಶಕರು ಮಾಡಿಕೊಂಡಿದ್ದ ಮೌಖಿಕ ಒಡಂಬಡಿಕೆಯಂತೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದಲ್ಲಿದ್ದವರು ರಾಜೀನಾಮೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಗುರುವಾರ ಡೇರಿ ಸಭಾಂಗಣದಲ್ಲಿ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ನಿಂಗರಾಜು, ಉಪಾಧ್ಯಕ್ಷ ಸ್ಥಾನಕ್ಕೆ ಸುಶೀಲಾ ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿ ಜಿ.ವಿ ಮುತ್ತುರಾಜು ಅವಿರೋಧ ಆಯ್ಕೆ ಘೋಷಣೆ ಮಾಡಿದರು. ನಿಕಟಪೂರ್ವ ಅಧ್ಯಕ್ಷ ನಾಗೇಂದ್ರಕುಮಾರ್ ಹಾಗೂ ಉಪಾಧ್ಯಕ್ಷ ಪ್ರವೀಣ್‌ಕುಮಾರ್, ನಿರ್ದೇಶಕರಾದ ಶಿವರುದ್ರಪ್ಪ, ಶಿವಲಿಂಗಪ್ಪ, ಶೀವಕುಮಾರ್, ಉಮೇಶ್, ಕುಮಾರ, ಮಹದೇವಯ್ಯ, ಸುಧಾ, ಕಾರ್ಯದರ್ಶಿ ಶಿವಪ್ರಕಾಶ್ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಹಾಲು ಉತ್ಪಾದಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net