ರಾಗಿಹಳ್ಳಿ ಕಾವಲು ಕೆರೆಯಲ್ಲಿ ಮೃತದೇಹ ಪತ್ತೆ

crime
Published on

ಹಾಸನ: ಹೊಳೆನರಸೀಪುರ ತಾಲೂಕಿನ ರಾಗಿಹಳ್ಳಿ ಕಾವಲು ಗ್ರಾಮದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ತಾಲೂಕಿನ ದೊಡ್ಡಹಳ್ಳಿ ಗ್ರಾಮದ ತಮ್ಮೇಗೌಡ(55) ಎಂದು ತಿಳಿದು ಬಂದಿದೆ. ಬೆಳಗ್ಗೆ 7ರ ಸಮಯದಲ್ಲಿ ಮೃತದೇಹ ಪತ್ತೆಯಾಗಿದ್ದು, ಮುಖ ಜಜ್ಜಿದ ರೀತಿಯಲ್ಲಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಗ್ರಾಮಸ್ಥರ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ ಹಳ್ಳಿಮೈಸೂರು ಉಪಗ್ರಾಮಾಂತರ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net