ರಾಜಕೀಯ ಪ್ರವೇಶಿಸಲು ಚಿಂತನೆ

28KMD-1
ಕಾರ್ಕಹಳ್ಳಿ ಗ್ರಾಮದಲ್ಲಿ ಕದಲೂರು ಉದಯ್ ಅಭಿಮಾನಿ ಸಂಘವನ್ನು ಸಮಾಜ ಸೇವಕ ಕದಲೂರು ಉದಯ್ ಉದ್ಘಾಟಿಸಿದರು.
Published on


ಕೆ.ಎಂ.ದೊಡ್ಡಿ; ಕ್ಷೇತ್ರದ ಜನರ ಒತ್ತಾಯದ ಮೇರೆಗೆ ರಾಜಕೀಯ ಪ್ರವೇಶಿಸುವ ಅಭಿಲಾಷೆ ಹೊಂದಿದ್ದೇನೆ ಎಂದು ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ, ಸಮಾಜ ಸೇವಕ ಕದಲೂರು ಉದಯ್ ಹೇಳಿದರು.

ಸಮೀಪದ ಕಾರ್ಕಹಳ್ಳಿ ಗ್ರಾಮದಲ್ಲಿ ಕದಲೂರು ಉದಯ್ ಅಭಿಮಾನಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸಾಮಾಜಿಕ ಚಿಂತನೆಗಳನ್ನು ಇಟ್ಟುಕೊಂಡು ಸಮಾಜ ಸೇವೆ ಮಾಡುತ್ತಿದ್ದೇನೆ. ಅಧಿಕಾರ ಇದ್ದರೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂದು ಹೇಳಿದರು.

ಮದ್ದೂರು ಕ್ಷೇತ್ರದ ಜನ ನನ್ನ ಮೇಲೆ ತೋರುತ್ತಿರುವ ಪ್ರೀತಿಗೆ ನಾನು ಸದಾ ಚಿರಋಣಯಾಗಿರುತ್ತೇನೆ. ಈಗಾಗಲೇ ನನ್ನ ಹೆಸರಿನಲ್ಲಿ ಸಾಕಷ್ಟು ಅಭಿಮಾನಿಗಳ ಸಂಘ ಸ್ಥಾಪಿಸಿದ್ದು, ಹಲವು ಸಮಾಜಮುಖಿ ಕೆಲಸಗಳನ್ನು ಆರಂಭಿಸಿ ಅಭಿಮಾನಿಗಳು ಸಹ ಸಮಾಜ ಸೇವೆಯತ್ತ ಹೆಜ್ಜೆ ಹಾಕುತ್ತಿರುವುದು ಅವರ ಸಮಾಜಿಕ ಕಳಕಳಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದರು.

ಮನ್‌ಮುಲ್ ಮಾಜಿ ಅಧ್ಯಕ್ಷ ಬಸವೇಗೌಡ, ಉದಯ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಚಿನ್, ಮುಖಂಡರಾದ ಕಾಯಿ ಜವರಾಯಿಗೌಡ, ಪಿ.ಜಿ.ಮಹದೇವು, ನಾಡಗೌಡ ತಮ್ಮಣ್ಣ, ರುದ್ರೇಶ್, ಶಿಲ್ಪಾ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net