ರಾಜೀನಾಮೆ ನೀಡದಿರುವುದು ಭಂಡತನಕ್ಕೆ ಸಾಕ್ಷಿ

lingaraj patil black
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಮುಡಾ ಹಗರಣದಲ್ಲಿ ತನಿಖೆಗೆ ಒಳಪಡಿಸಲು ರಾಜ್ಯಪಾಲರು ಅನುಮತಿ ನೀಡಿದರೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡದಿರುವುದು ಅವರ ಭಂಡತನಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಧಾರವಾಡ ವಿಭಾಗದ ಪ್ರಭಾರಿ ಲಿಂಗರಾಜ ಪಾಟೀಲ ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲರು ನೀಡಿದ ಆದೇಶಕ್ಕೆ ಸಿದ್ದರಾಮಯ್ಯನವರು ಹಾಗೂ ಸಂಪುಟ ಸಚಿವರು ಸ್ಪಂದಿಸುತ್ತಿರುವುದನ್ನು ನೋಡಿದರೆ ಬಂಡತನದ ಪರಮಾವಧಿ ಎನ್ನದೆ ವಿಧಿ ಇಲ್ಲ. ಪ್ರತಿ ಪಕ್ಷದವರು ಹಾಗೂ ಕಾನೂನು ಪಂಡಿತರು ನೈತಿಕ ಆಧಾರದ ಮೇಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದದ್ದು ಮುಖ್ಯಮಂತ್ರಿಗಳ ಕರ್ತವ್ಯ ಎಂದು ಹೇಳಿದ್ದಾರೆ. ಆದರೆ, ನಾನು ಏನು ತಪ್ಪು ಮಾಡಿಲ್ಲ, ನನ್ನ ಜೀವನ ತೆರೆದ ಪುಸ್ತಕ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ, ರಾಜ್ಯಪಾಲರೇ ರಾಜಿನಾಮೆ ನೀಡಬೇಕೆಂದು ಕೇಳುತ್ತಿರುವುದು ಹಾಸ್ಯಾಸ್ಪದ ಎಂದಿದ್ದಾರೆ.

ಹಿಂದೆ ಬಿ.ಎಸ್. ಯಡಿಯೂರಪ್ಪನವರ ಮೇಲೆ ಇದೇ ರೀತಿ ಅಪಾದನೆ ಬಂದಾಗ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದು ಸಿದ್ದರಾಮಯ್ಯನವರಿಗೆ ಗೊತ್ತಿರುವ ಸಂಗತಿ. ಆ ಸಂದರ್ಭದಲ್ಲಿ ಸಿದ್ದರಾಮಯ್ಯನವರು ತಾವೇ ನೀಡಿದ ಹೇಳಿಕೆಗಳನ್ನು ಒಮ್ಮೆ ನೆನಪಿಸಿಕೊಳ್ಳುವುದು ಒಳ್ಳೆಯದು. ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿದರೆ ಅವರ ವ್ಯಕ್ತಿತ್ವಕ್ಕೆ ಬೆಲೆ ಬಂದಂತಾಗುತ್ತದೆ ಎಂದು ಅಭಿಪ್ರಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net