

ಮೈಸೂರು: ಮೇಯರ್, ಉಪಮೇಯರ್ ಚುನಾವಣೆ ಈಗ ಮುಗಿದ ಅಧ್ಯಾಯ. ಜೆಡಿಎಸ್ ಕೈ ತಪ್ಪಿದ ಉಪಮೇಯರ್‌ಗೆ ಹಾಲಿ ಚುನಾಯಿತ ಜಿ.ರೂಪಾ ಅವರಿಂದ ರಾಜೀನಾಮೆ ಪಡೆದು ಜೆಡಿಎಸ್‌ಗೆ ಉಪ ಮೇಯರ್ ಸ್ಥಾನ ಕೊಡುವ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟ ಪಡಿಸಿದರು.
ಅಲ್ಪಸಂಖ್ಯಾತ ಮಹಿಳೆಗೆ ಉಪ ಮೇಯರ್ ಮಾಡಲು ಪಕ್ಷ ನಿರ್ಧರಿಸಿತ್ತು. ಆದರೆ ಜಾತಿ ಪ್ರಮಾಣ ಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಪಕ್ಷಕ್ಕೆ ಉಪ ಮೇಯರ್ ಸ್ಥಾನ ಕೈ ತಪ್ಪಿತು. ಈಗ 4 ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್‌ಗೆ ಕೊಡಬೇಕೆಂದು ತೀರ್ಮಾನವಾಗಿದೆ. ಚುನಾವಣೆ ವೇಳೆಯಲ್ಲಿ ಸಂಸದ ಪ್ರತಾಪ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ಎಂಎಲ್‌ಸಿ ಸಿ.ಎನ್.ಮಂಜೇಗೌಡ ತೀರ್ಮಾನ ಮಾಡಿದ್ದಾರೆ ಎಂದು ವಿವರಿಸಿದರು.