

ಬೀದರ್: ಇಲ್ಲಿಯ ಶಿವನಗರದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಡಿ. ದೇವರಾಜ ಅರಸು ಅವರ ಜಯಂತಿ ಆಚರಿಸಲಾಯಿತು.
ರಾಜೀವ್ ಗಾಂಧಿ ಪ್ರಧಾನಿಯಾಗಿ, ಡಿ. ದೇವರಾಜ ಅರಸು ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದ್ದರು. ಹತ್ತು ಹಲವು ಯೋಜನೆಗಳ ಮೂಲಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದು ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗೀತಾ ಪಂಡಿತರಾವ್ ಚಿದ್ರಿ ಅವರು ರಾಜೀವ್ ಗಾಂಧಿ ಹಾಗೂ ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಮೃತರಾವ್ ಚಿಮಕೋಡೆ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಮುಖಂಡರಾದ ಗೋವರ್ಧನ್ ರಾಠೋಡ್, ಶಂಕರ ರೆಡ್ಡಿ ಚಿಟ್ಟಾ, ಅಬ್ದುಲ್ ಮನ್ನಾನ್ ಸೇಠ್, ಸಂಜಯ್ ಜಾಗೀರದಾರ್, ಸಂಜುಕುಮಾರ ಡಿ.ಕೆ, ಶರಣಪ್ಪ ಶರ್ಮಾ, ಪರ್ವೇಜ್ ಕಮಲ್, ಶಾಕೀರ್, ಸುನೀಲ್ ಬಚ್ಚನ್, ಎಂ.ಡಿ. ಮಿಸ್ಬಾ, ವಿಶಾಲ್ ದೊಡ್ಡಿ, ಕೆ.ಟಿ. ವಿಶ್ವನಾಥ ಮತ್ತಿತರರು ಇದ್ದರು.