

ಚಿತ್ರದುರ್ಗ: ಭಾರತಕ್ಕೆ ಸಂಪರ್ಕ ಕ್ರಾಂತಿಯ ಮೂಲಕ ತಂತ್ರಜ್ಞಾನಕ್ಕೆ ಆಧುನಿಕ ಸ್ಪರ್ಶ ನೀಡಿದ ಮೇರು ಚಿಂತಕ ರಾಜೀವ್ ಗಾಂಧಿ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್ ತಿಳಿಸಿದರು.
ಪಕ್ಷದ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ರಾಜೀವ್‌ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ಬುಧವಾರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
18 ವರ್ಷಕ್ಕೆ ಮತದಾನದ ಹಕ್ಕನ್ನು ಜಾರಿಗೊಳಿಸಿ, 73 ಮತ್ತು 74ನೇ ಸಂವಿಧಾನಾತ್ಮಕ ತಿದ್ದುಪಡಿಗೆ ಅಡಿಗಲ್ಲು ಹಾಕಿದ ರಾಜೀವ್ ಗಾಂಧಿ ಅವರು ಅಗಲಿ 34 ವರ್ಷ ಕಳೆದರೂ, ದೇಶಕ್ಕೆ ನೀಡಿದ ಕೊಡುಗೆಗಳು ಚಿರಸ್ಥಾಯಿಯಾಗಿ ಉಳಿದಿವೆ ಎಂದರು.
ಎಸ್ಟಿ ಘಟಕದ ಅಧ್ಯಕ್ಷ ಜಯಣ್ಣ ಮಾತನಾಡಿ, ಮಾಜಿ ಪ್ರಧಾನಿಗಳಾದ ಇಂದಿರಾಗಾಂಧಿ, ರಾಜೀವ್‌ಗಾಂಧಿ ಅವರು ದೇಶಕ್ಕಾಗಿ ನೀಡಿದ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಂದಿನಿಗೌಡ, ಪದಾಧಿಕಾರಿಗಳಾದ ಡಿ.ಎನ್.ಮೈಲಾರಪ್ಪ, ಮಂಜುನಾಥ್, ರವಿಕುಮಾರ್, ಭೀಮರಾಜ್, ಸಾಧಿಕ್‌ವುಲ್ಲಾ, ಮುದಸಿರ್ ನವಾಜ್, ಪ್ರಕಾಶ್, ನಾಗೇಂದ್ರಪ್ಪ ಇತರರಿದ್ದರು.