

ಚಾಮರಾಜನಗರ: ಮೈಸೂರಿನ ಸುತ್ತೂರು ಮಠದ ಹಿರಿಯ ಶ್ರೀಗಳಾದ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು ಎಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರ ಮೂಲಕ ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಹಾಸಭಾ ಅಧ್ಯಕ್ಷ ಚಾ.ರಂ.ಶ್ರೀನಿವಾಸ್‌ಗೌಡ ಮಾತನಾಡಿ, ರಾಜ್ಯದಲ್ಲಿ ಶಿಕ್ಷಣ, ದಾಸೋಹ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅಪಾರವಾದ ಸೇವೆಯನ್ನು ಸಲ್ಲಿಸಿದ್ದಾರೆ. ಈ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಪಾಲಿಗೆ ಶ್ರೀಗಳು ಬೆಳಕಾಗಿದ್ದಾರೆ. ಜೆಎಸ್‌ಎಸ್ ಸಂಸ್ಥೆಗಳ ಮೂಲಕ ನಾಡಿನ ಮನೆಮಾತಾಗಿರುವ ರಾಜೇಂದ್ರಶ್ರೀಗಳ 110ನೇ ಜನ್ಮ ದಿನಾಚರಣೆಯ ಸುಸಂದರ್ಭದಲ್ಲಿ ಭಾರತ ಸಕರ್ಅರ ಕೊಡಮಾಡುವ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರಿಗೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಹಾಸಭಾದ ಎಸ್.ಮಹೇಶ್‌ಗೌಡ, ಸಮಾಜಸೇವಕ ಪರಮೇಶ್ವರಪ್ಪ, ಎಚ್.ಎಂ.ಶಿವಣ್ಣ ಹೊಸೂರು, ಪಣ್ಯದಹುಂಡಿ ರಾಜು, ಚಾ.ಸಿ.ಸಿದ್ದರಾಜು, ತಾಂಡವಮೂರ್ತಿ, ಪ್ರದೀಪ್, ಎಚ್.ಗೋವಿಂದರಾಜು ಹಾಗೂ ಇತರರು ಹಾಜರಿದ್ದರು.