ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರತಿಭಟನೆ:ರವಿ ಕಿರಣ್ ಪೂಣಚ್ಚ ಎಚ್ಚರಿಕೆ

ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರತಿಭಟನೆ:ರವಿ ಕಿರಣ್ ಪೂಣಚ್ಚ ಎಚ್ಚರಿಕೆ
Published on

ಹಾಸನ: ರಾಜ್ಯದಲ್ಲಿ ಜನಪರವಾದಂತಹ ಯಾವುದೇ ಕೆಲಸಕ್ಕೆ ಒತ್ತು ಕೊಡದೇ ಅಧಿಕಾರದ ದುರ್ಬಳಕೆ ಮಾಡಿಕೊಂಡಂತಹ ಬಿಜೆಪಿ ಸರ್ಕಾರದಂತೆ ಕಾಂಗ್ರೆಸ್ ಸರ್ಕಾರ ಕೂಡ ರೈತರ ಸಮಸ್ಯೆಗೆ ಸ್ಪಂದಿಸುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ರೈತ ಸಂಘದ ವತಿಯಿಂದ ಶೀಘ್ರದಲ್ಲಿಯೇ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕಿರಣ್ ಪೂಣಚ್ಚ ತಿಳಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡ ಕೇವಲ ಭರವಸೆಗಳನ್ನು ನೀಡಿ ರೈತರಿಗೆ ವಂಚನೆ ಮಾಡುತ್ತಿದೆ. ಕೊಬ್ಬರಿಗೆ ರೈತರಿಗೆ ಬೇಡಿಕೆಯಷ್ಟು ಬೆಂಬಲ ಬೆಲೆ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಬರ ಪರಿಹಾರ ನೀಡುವಲ್ಲಿ ಕೂಡ ಸರ್ಕಾರಗಳು ವಿಫಲವಾಗಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ತೋರಿವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ರೈತ ಸಂಘದಿಂದ ಮುಂಬರುವ ಸ್ಥಳೀಯ ಸಂಸ್ಥೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸುವ ನಿಟ್ಟಿನಲ್ಲಿ ನಿರ್ಣಯ ಕೈಗೊಂಡಿದ್ದು ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಸಂಚಲನ ಸಮಿತಿಯನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಘು ಹಿರೀಸಾವೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ವಾಜಿದ್, ತಾಲೂಕು ಅಧ್ಯಕ್ಷ ಶಾಂತರಾಜ್ ಅರಸ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net