

ಮಡಿಕೇರಿ: ರಾಜ್ಯ ಸರ್ಕಾರದಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದ್ದು, ಜಿಲ್ಲೆಯ ಪೂರ್ಣೇಶ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಡಿಕೇರಿ ತಾಲೂಕು ಬೊಯಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲತಃ ಸೋಮವಾರಪೇಟೆಯವರಾದ ಪೂರ್ಣೇಶ್ ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಕರಾಗಿದ್ದಾರೆ.
ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರಿಗೆ ಪ್ರಶಸ್ತಿ ಪ್ರಕಟವಾಗಿದ್ದು, ಹಾಕಿ ಕ್ರೀಡೆಯ ಬಗ್ಗೆ ವಿಶೇಷ ಒಲವು ಹೊಂದಿರುವ ಪೂರ್ಣೇಶ್ ಜಿಲ್ಲೆಯಿಂದ ಆಯ್ಕೆ ಆಗಿದ್ದಾರೆ. ಇವರ ಗರಡಿಯಲ್ಲಿ ತರಬೇತಿ ಪಡೆದ ನೂರಾರು ಹಾಕಿಪಟುಗಳು ರಾಜ್ಯ, ರಾಷಟ್ರೆ ಮಟ್ಟದಲ್ಲಿ ಖ್ಯಾತಿಗಳಿಸಿದ್ದಾರೆ.