ರಾಜ್ಯ ಬಿಜೆಪಿ ನಾಯಕರಿಗೆ ಸೋಲುವ ಭೀತಿ

Saleem
Published on

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್‌ನ 5 ಗ್ಯಾರಂಟಿ ಜೊತೆಗೆ ಜನಪರ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಅನುದಾನ ಮೀಸಲಿಟ್ಟು, ಮಂಡಿಸಿದ ಬಜೆಟ್‌ನಿಂದ ಕಂಗಾಲಾಗಿರುವ ಬಿಜೆಪಿ ನಾಯಕರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿ ಕಾಡಲಾರಂಭಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದರು.

ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಬಜೆಟ್ ಕುರಿತು ಪೂರ್ವಾಪರ ತಿಳಿದುಕೊಳ್ಳದೆ, ಮಂಡನೆಗೂ ಮೊದಲೇ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದು, ಸರಿಯಲ್ಲ ಎಂದು ಕಿಡಿಕಾರಿದರು.

ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿಯಿಂದಾಗಿಯೇ ಐಟಿ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸೀಜ್ ಮಾಡುವ ಮೂಲಕ ಬಿಜೆಪಿ ದ್ವೇಷ ರಾಜಕಾರಣಕ್ಕೆ ಮುಂದಾಗಿದೆ. ಇದನ್ನು ದೇಶದ ಜನ ಗಮನಿಸುತ್ತಿದ್ದು, ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net