ರಾಜ್ಯ ಬಿಜೆಪಿಗೆ ಹೊಸ ಉತ್ಸಾಹ

dinada chitra
Published on

ಬೀದರ್: ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಪಕ್ಷದ ಮುಖಂಡ, ಜಿಕೆ ಫೌಂಡೇಷನ್ ಅಧ್ಯಕ್ಷ ಗುರುನಾಥ ಕೊಳ್ಳುರ್ ಅವರು ಸನ್ಮಾನಿಸಿ ಅಭಿನಂದಿಸಿದರು.

ರಾಜ್ಯದ ಬಿಜೆಪಿಗೆ ಯಡಿಯೂರಪ್ಪ ಅವರು ನೀಡಿರುವ ಕೊಡುಗೆ ಅಪಾರ. ಮುಖ್ಯಮಂತ್ರಿಯಾಗಿ ಅನೇಕ ಜನಪರ, ವಿನೂತನ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಸಮಗ್ರ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಎಲ್ಲ ಸಮುದಾಯಗಳ ಹಿತಕ್ಕಾಗಿ ಶ್ರಮಿಸಿದ್ದಾರೆ. ಅವರ ಸೇವೆ ಗುರುತಿಸಿ ಪಕ್ಷದ ವರಿಷ್ಠರು ಉನ್ನತ ಸ್ಥಾನಮಾನ ನೀಡಿರುವುದು ಬಿಜೆಪಿಗೆ ಹೊಸ ಉತ್ಸಾಹ ತಂಬಿದಂತಾಗಿದೆ ಎಂದು ಕೊಳ್ಳುರ್ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net