ರಾಜ್ಯ ಮಟ್ಟಕ್ಕೆ ಆಯ್ಕೆ

Screenshot_20221112_165525
ಹೊಳೆನರಸೀಪುರ ತಾಲೂಕಿನ ದೊಡ್ಡ ಕಾಡನೂರು ಜೆ ಎಸ್ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Published on

ಹೊಳೆನರಸೀಪುರ : ತಾಲೂಕಿನ ದೊಡ್ಡಕಾಡನೂರು ಗ್ರಾಮದ ಜೆಎಸ್‌ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚಿಗೆ ಹಾಸನ ಜಿಲ್ಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದ್ವಿತೀಯ ಪಿಯುಸಿ ಕಲಾ ವಿಭಾಗದ ಹೇಮಂತ್ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಹರ್ಡಲ್ಸ್ ಸ್ಪರ್ಧೆ ಚಂದ್ರಿಕಾ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆ ಅಭಿನಂದಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net