ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಗೆ ಆಯ್ಕೆ

1209Klb15
Published on

ಕಲಬುರಗಿ: ನಗರದ ಚಂದ್ರಕಾಂತ ಪಾಟೀಲ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ರಾಜ್ಯ ಸಹಕಾರ ಮಂಡಳಿ ಬೆಂಗಳೂರು ಹಾಗೂ ಜಿಲ್ಲಾ ಸಹಕಾರ ಒಕ್ಕೂಟ ಮತ್ತು ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಅಂತರ ಕಾಲೇಜಗಳ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
`ಯುವ ನಾಯಕತ್ವದಿಂದ ಮಾತ್ರವೇ ಸಹಕಾರಿ ವ್ಯವಸ್ಥೆ ಬಲಾಡ್ಯ' ವಿಷಯ ಕುರಿತು ಚರ್ಚೆ ನಡೆಯಿತು. ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅದಿತಿ ಮೆಹೆತಾ ಪ್ರಥಮ ಸ್ಥಾನ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಮಯ್ಯ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಅಧ್ಯಕ್ಷ, ರಾಜ್ಯ ವಿಧಾನಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ್, ಪ್ರಾಚಾರ್ಯ ಡಾ.ಆರ್.ಕೃಷ್ಣಮೂರ್ತಿ, ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net