ರಾಜ್ಯ ಮಟ್ಟದ ಚೆಸ್‌ಗೆ ಎಸ್‌ಬಿಆರ್ ಮಕ್ಕಳು ಆಯ್ಕೆ

Chess
Published on

ಕಲಬುರಗಿ: ಶಾಲಾ ಶಿಕ್ಷಣ ವತಿಯಿಂದ ಎಸ್‌ಆರ್‌ಎನ್ ಮೆಹತಾ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆ(ಎಸ್‌ಬಿಆರ್)ಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದಲ್ಲಿ ಅರ್ಮಿತಾ ಎಸ್.ರಾಂಪೂರೆ, ಅನೀಷಾ ಎಂ.ಪಾಟೀಲ್, ಸಕಲ್ ಆರ್.ಬಿರಾದಾರ್, ಲಕ್ಷಿö್ಮÃ ಆರ್. ರೋಣದ ಸ್ಪರ್ಧೆಯಲ್ಲಿ ಪ್ರತಿಭೆ ಮೆರೆದ ವಿದ್ಯಾರ್ಥಿಗಳು. ಸಂಸ್ಥೆ ಅಧ್ಯಕ್ಷರಾದ ಶ್ರೀ ಡಾ.ಶರಣಬಸವಪ್ಪ ಅಪ್ಪ, ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಹಾಗೂ ೯ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ, ಪ್ರಾಚಾರ್ಯ ಎನ್.ಎಸ್.ದೇವರಕಲ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net