

ಕೆ.ಆರ್. ಸಾಗರ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರಾದ ಪಿ. ಶ್ರೇಯಾ ಮತ್ತು ಕೆ.ಎಸ್. ಸಂಜನಾ ಸೋಮವಾರ ಪಾಂಡವಪುರದಲ್ಲಿ ಆಯೋಜಿಸಿದ್ದ 30ನೇ ಮಂಡ್ಯ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ವಿಜೇತರಾಗಿ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಪರಿಸರ ಮತ್ತು ಕರೊನಾ ಎಂಬ ವಿಚಾರವಾಗಿ ವಿಷಯ ಮಂಡನೆ ಮಾಡಿ ವಿಜೇತರಾಗಿ ಕಲಬುರಗಿಯಲ್ಲಿ ಜ.16 ರಿಂದ 18ರವರೆಗೆ ನಡೆಯುವ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ.
ಮಕ್ಕಳಿಗೆ ಪ್ರೋತ್ಸಾಹ ನೀಡಿದ ಶಿಕ್ಷಕರಾದ ಎಸ್. ಜಯಲಕ್ಷ್ಮೀ ಮತ್ತು ರಾಮಪ್ರಸಾದ ಪೊನ್ನುಸ್ವಾಮಿ ಅವರಿಗೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ನಂದಕುಮಾರ್, ಮುಖ್ಯ ಶಿಕ್ಷಕ ಉಮೇಶ್ವರ್ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.