ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ!?..

ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ!?..
Published on

 ಬೇಲೂರು: ಬಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಬೂತ್ ಮಟ್ಟದ ಅಧ್ಯಕ್ಷರ ಮನೆ ಮೇಲೆ ಪಕ್ಷದ ಬಾವುಟ ಹಾರಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಟಿಕೆರೆ ಪ್ರಕಾಶ್ ಹೇಳಿದರು.


ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ಬಿಜೆಪಿ ಹೆಬ್ಬಾಳು ಶಕ್ತಿ ಕೇಂದ್ರದಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಅಧ್ಯಕ್ಷ ಮನೆ ಮೇಲೆ ಪಕ್ಷದ ಬಾವುಟ ಕಟ್ಟಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದಲ್ಲಿ ನಮ್ಮದೇ ಸರ್ಕಾರ ಉತ್ತಮ ಆಡಳಿತ ಮಾಡುತ್ತಿದೆ. ಈ ನಿಟ್ಟಿನಲ್ಲಿ ಜನರಿಗೆ ನಮ್ಮ ಸರ್ಕಾರಗಳ ಸಾಧನೆಗಳನ್ನು ಮನೆ ಮನೆಗೂ ಮುಟ್ಟಿಸುವ ನಿಟ್ಟಿನಲ್ಲಿ ಈಗಾಗಲೇ ಕಳೆದ ಎರಡನೇ ದಿನಾಂಕದಿಂದ 13ನೇ ದಿನಾಂಕದವರೆಗೆ ಬೇಲೂರು ವಿಧಾನಸಭಾ ಕ್ಷೇತ್ರದ ಎಲ್ಲ ಶಕ್ತಿ ಕೇಂದ್ರಗಳಲ್ಲಿರುವ ಬೂತ್‌ಗಳಲ್ಲೂ ಆಯಾ ಭಾಗದ ಮುಖಂಡರು ಮತ್ತು ಕಾರ್ಯಕರ್ತರು ಬೂತ್ ಮಟ್ಟದ ಅಧ್ಯಕ್ಷ ಮನೆಗಳ ಮೇಲೆ ಬಾವಟಗಳನ್ನು ಹಾರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಮತ್ತೊಮ್ಮೆ ರಾಜ್ಯದಲ್ಲಿ ಮತ್ತೊಮ್ಮೆ 2023ರಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತುರುವುದಕ್ಕೆ ಮುಂದಾಗಲಿದ್ದೇವೆ. ಅದೇ ರೀತಿ ಬೇಲೂರು ಕ್ಷೇತ್ರದಲ್ಲೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಶಾಸಕರನ್ನು ಆರಿಸುವುದಕ್ಕಾಗಿ ಬೂತ್ ಮಟ್ಟದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ಕೈಗೊಂಡು ಪ್ರತಿಯೊಂದು ಬೂತ್‌ಗೂ ಹೋಗಿ ಕೆಲಸ ಮಾಡಲಾಗುತ್ತಿದೆ. ಈಗಾಗಲೇ ಹೆಬ್ಬಾಳು ಶಕ್ತಿ ಕೇಂದ್ರದಲ್ಲಿ ಮುತ್ತುಗನ್ನ, ಮಲ್ಲನಹಳ್ಳಿ, ಶಿವಾಲದಹಳ್ಳಿ. ದೊಡ್ಡಬೇಡಗೆರೆ, ಹುಣಸೆಕೆರೆಗಳಲ್ಲಿ ಕಾರ್ಯಕ್ರಮ ಮಾಡುತಿದ್ದೇವೆ ಎಂದರು.


ತಾಪಂ ಮಾಜಿ ಅಧ್ಯಕ್ಷ ಪರ್ವತಯ್ಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶೇಖರಯ್ಯ, , ಬೂತ್ ಅಧ್ಯಕ್ಷ ರಮೇಶ್, ಮುಖಂಡರಾದ ನಿಂಗರಾಜು ಜಗಧೀಶ್, ಚಂದ್ರಯ್ಯ, ರಾಮೇಗೌಡ, ಮಲ್ಲೇಶ್, ಲಕ್ಷ್ಮಣ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net