

ಗೊರೇಬಾಳ: ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಮುಖ್ಯಶಿಕ್ಷಕಿ ವನಮಾಲ ಶುಕ್ರವಾರ ಧ್ವಜಾರೋಹಣ ನೆರವೇರಿಸಿದರು.
ಕನ್ನಡ ಭಾಷೆಯನ್ನು ಬೆಳೆಸುವುದರೊಂದಿಗೆ ಇತರ ಭಾಷೆಯನ್ನು ಗೌರವಿಸಬೇಕು. ಆದರೆ, ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡುವ ಮೂಲಕ ರಾಜ್ಯ ರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕೆಂದು ಹೇಳಿದರು.