

ಕಲಬುರಗಿ: ರಾಜ್ಯ ಶಿಕ್ಷಕರ ಪ್ರಶಸ್ತಿ ಕಲಬುರಗಿ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಕರವೇ ಕಾವಲುಪಡೆ ಕಲಬುರಗಿ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ರಾಜ್ಯ ಸರ್ಕಾರವು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಿರುವುದು ಸರಿಯಾದ ನಿರ್ಧಾರ. ಆದರೇ ಈ ಬಾರಿ ಪ್ರಶಸ್ತಿ ನೀಡುವ ವೇಳೆ ಕಲಬುರಗಿ ಜಿಲ್ಲೆಗೆ ಅನ್ಯಾಯ ಮಾಡಿರುವುದನ್ನು ಖಂಡಿಸಿದ್ದಾರೆ. ಪ್ರಸ್ತುತ ವರ್ಷದಲ್ಲಿ ಕಲಬುರಗಿ ಜಿಲ್ಲೆಯಿಂದ ರಾಜ್ಯ ಪ್ರಶಸ್ತಿಗೆ ಎರಡು ಪ್ರಸ್ತಾವನೆ ಕಳುಹಿಸಿ ಕೊಡಲಾಗಿತ್ತು. ಆದರೆ ಆಯ್ಕೆ ಸಮಿತಿ ಕನಿಷ್ಠ ಪಕ್ಷ ಒಂದು ಪ್ರಶಸ್ತಿಯೂ ಜಿಲ್ಲೆಗೆ ಕೊಡದಿರುವುದು ಖಂಡನೀಯ. ಕೂಡಲೇ ಈ ತಪ್ಪನ್ನು ತಿದ್ದಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.