ರಾಜ್ಯ ಸರ್ಕಾರದಿಂದ ಅನುದಾನ ಕಡಿತ

bkt-13-7
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸಂಗಮೇಶ ದಳವಾಯಿ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮೇಶ ಹೂಗಾರ , ನಗರಸಭೆ ಅಧ್ಯಕ್ಷೆ ಸವಿತಾ ಲೆಂಕಣ್ಣವರ, ಉಪಾಧ್ಯಕ್ಷೆ ಶೋಭಾ ರಾವ್, ಸುಜಾತಾ ಶಿಂಧೆ, ಗೀತಾ ಸೂರ್ಯವಂಶಿ, ವೀರಣ್ಣ ಹಳೇಗೌಡರ, ಬಸವರಾಜ ಬೂತಾಳಿ ಇದ್ದರು.
Published on

ಬಾಗಲಕೋಟೆ: ಹಿಂದುಳಿದ ವರ್ಗಗಳ ನಿಗಮಗಳಿಗೆ ರಾಜ್ಯ ಸರ್ಕಾರ ಅನುದಾನವನ್ನು ನೀಡದೆ ವಂಚನೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ನವನಗರದ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಅಹಿಂದ ಹೆಸರಿನಲ್ಲಿ ಅಽಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹಿಂದುಳಿದ ವರ್ಗಗಳ ಜನರ ಆರ್ಥಿಕ, ಔದ್ಯೋಗಿಕ, ಕೃಷಿ ಮತ್ತು ಶಿಕ್ಷಣ ದೃಷ್ಟಿಕೋನದಿಂದ ಆರಂಭಗೊAಡಿರುವ ನಿಗಮಗಳಿಗೆ ಅನುದಾನ ನೀಡದೆ ವಂಚಿಸಿರುವುದು ನೋವಿನ ಸಂಗತಿ ಎಂದರು.

ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸಂಗಮೇಶ ದಳವಾಯಿ ಮಾತನಾಡಿ, ಈ ಹಿಂದೆ ಬಿಜೆಪಿ ಸರ್ಕಾರದ ಅವಽಯಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ೧ ಸಾವಿರ ಕೋಟಿಗೂ ಅಽಕ ಮೊತ್ತವನ್ನು ನೀಡಿ ಅಭಿವೃದ್ಧಿಗೆ ಶ್ರಮಿಸಿತ್ತು ಎಂದು ಹೇಳಿದರು.

ಡಿ.ದೇವರಾಜ ಅರಸು, ಒಕ್ಕಲಿಗ, ಮರಾಠ, ವಿಶ್ವಕರ್ಮ, ವೀರಶೈವ ಲಿಂಗಾಯತ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಅಲೆಮಾರಿ, ಅರೆಅಲೆಮಾರಿ, ಮಡಿವಾಳ ಮಾಚಿದೇವ ಮತ್ತು ಕಾಡುಗೊಲ್ಲ ನಿಗಮಗಳಿಗೆ ಸಾಕಷ್ಟು ಅನುದಾನ ನೀಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ೧೬೦೦ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಘೋಷಿಸಿ ಕೇವಲ ೫೭.೦೪ ಕೋಟಿ ರೂ.ಗಳನ್ನು ನೀಡಿದೆ ಎಂದು ದೂರಿದರು.

ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮೇಶ ಹೂಗಾರ ಮಾತನಾಡಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಶೈಕ್ಷಣಿಕ ಸಾಲಕ್ಕಾಗಿ ೬೦೬೫ ಅರ್ಜಿಗಳು ಸಲ್ಲಿಕೆಯಾಗಿದ್ದರೂ ನಯಾಪೈಸೆ ಬಿಡುಗಡೆಗೊಳಿಸಿಲ್ಲ. ಹೂಗಾರ, ಕಂಬಾರ, ಕುಂಬಾರ, ಗಾಣಿಗ, ಹಡಪದ, ಈಡಿಗ ಮತ್ತು ಮಾಳಿ ಸಮುದಾಯಗಳು ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಂದೆಬರಲು ಪ್ರತ್ಯೇಕ ಅಭಿವೃದ್ಧಿ ನಿಗಮಗಳನ್ನು ಬಿಜೆಪಿ ಸರ್ಕಾರ ಸ್ಥಾಪಿಸಿತ್ತು. ಆದರೆ ಅವುಗಳಿಗೂ ಈಗಿನ ಸರ್ಕಾರ ಅನುದಾನ ನೀಡದೆ ಮೋಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷೆ ಸವಿತಾ ಲೆಂಕಣ್ಣವರ, ಉಪಾಧ್ಯಕ್ಷೆ ಶೋಭಾ ರಾವ್, ಸುಜಾತಾ ಶಿಂಧೆ, ಗೀತಾ ಸೂರ್ಯವಂಶಿ, ವೀರಣ್ಣ ಹಳೇಗೌಡರ, ಬಸವರಾಜ ಬೂತಾಳಿ, ರಾಜು ಗೆಣ್ಣೂರ ಮತ್ತಿತರರು ನೇತೃತ್ವವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net