ರಾಜ್ಯ ಸರ್ಕಾರದಿಂದ ಭ್ರಷ್ಟಾಚಾರ

nrp proteast
ಎನ್.ಆರ್.ಪುರ ತಾಲೂಕು ಕಚೇರಿ ಎದುರು ಜೆಡಿಎಸ್‌ನಿಂದ ಪ್ರತಿಭಟನೆ ನಡೆಸಲಾಯಿತು. ಸುಧಾಕರ್ ಎಸ್. ಶೆಟ್ಟಿ, ಚಂದ್ರಶೇಖರ್, ಕಣಿವೆ ವಿನಯ್, ಕೆ.ಎನ್.ಶಿವದಾಸ್, ಬಿ.ಟಿ.ರವಿ, ಉಪೇಂದ್ರ, ಸುಬೋದ್, ಮನು, ಶಾರದಾ ಇತರರಿದ್ದರು.
Published on

ಎನ್.ಆರ್.ಪುರ: ಎಸ್ಟಿ ಜನಾಂಗಕ್ಕೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ದುರಪಯೋಗ ಪಡಿಸಿಕೊಂಡಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಎಸ್. ಶೆಟ್ಟಿ ಆರೋಪಿಸಿದರು.

ಶನಿವಾರ ತಾಲೂಕು ಕಚೇರಿ ಎದುರು ಜೆಡಿಎಸ್‌ನಿಂದ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿ, ಸರ್ಕಾರ ಎಲ್ಲ ರಂಗದಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ವಸತಿ ಸಚಿವರು ಮನೆ ನೀಡುವುದಕ್ಕೆ ಲಂಚ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕರೇ ಆರೋಪಿಸಿದ್ದಾರೆ. ಶೃಂಗೇರಿ ಕ್ಷೇತ್ರದಲ್ಲಿ 7 ವರ್ಷಗಳಿಂದ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಅಧಿಕಾರಿಗಳ ಮೇಲೆ ಶಾಸಕರಿಗೆ ಹಿಡಿತ ಇಲ್ಲವಾಗಿದೆ. ಶಾಸಕರ ನಿಕಟವರ್ತಿಗಳಿಗೆ ಮಾತ್ರ ಸಾಗುವಳಿ ಚೀಟಿ ನೀಡಲಾಗಿದೆ. ತಾಲೂಕು ಕಚೇರಿಯಲ್ಲಿ ಪಹಣಿ ಮಾಡಿಸಬೇಕಾದರೆ ಲಂಚ ನೀಡಬೇಕು. ಮೊದಲು ಶಾಸಕರು ಎಚ್ಚರಗೊಳ್ಳಬೇಕು. ವಿಪಕ್ಷಗಳು ನೀಡುವ ಸಲಹೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಜೆಡಿಎಸ್ ಕ್ಷೇತ್ರ ಕೋರ್ ಕಮಿಟಿ ಸದಸ್ಯ ಕಣಿವೆ ವಿನಯ್ ಮಾತನಾಡಿ, ಸರ್ಕಾರ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪಡಿಸಿಕೊಂಡಿದೆ. ಶೃಂಗೇರಿ ಕ್ಷೇತ್ರದ ಎಲ್ಲ ರಸ್ತೆಗಳಲ್ಲಿ ಹೊಂಡ ಬಿದ್ದಿವೆ. ಕಾಡಾನೆ ಕಾಟದಿಂದ ತೋಟ, ಗದ್ದೆ ಹಾಳಾಗುತ್ತಿದೆ. ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಮನೆ ನೀಡಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಕಾಂಗ್ರೆಸ್ ಅಂಬೇಡ್ಕರ್ ಹೆಸರು ಹೇಳಿ ಅಧಿಕಾರಕ್ಕೆ ಬಂದಿದೆ. ಈಗ ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪಕ್ಷದ ಮುಖಂಡರಾದ ಕೆ.ಎನ್.ಶಿವದಾಸ್, ಬಿ.ಟಿ.ರವಿ, ಉಪೇಂದ್ರ, ಸುಬೋದ್, ಸುಪ್ರೀತ್, ಸುಬಾನ್, ನಾಗೇಶ್, ಮಡಬೂರು ಸತೀಶ್, ಮನು, ಶಾರದಾ, ಎನ್.ಎಂ.ಮರುಳಪ್ಪ, ಪಿಕಪ್ ಚಂದ್ರು, ತಿಮ್ಮಣ್ಣ, ನಾಗೇಶ್, ವಿಜಯನ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net