ರಾಜ್ಯ ಸಾಂಸ್ಕೃತಿಕ ನಾಯಕ ಘೋಷಿಸಿದ ಸರ್ಕಾರಕ್ಕೆ ಅಭಿನಂದನೆ

ರಾಜ್ಯ ಸಾಂಸ್ಕೃತಿಕ ನಾಯಕ ಘೋಷಿಸಿದ ಸರ್ಕಾರಕ್ಕೆ ಅಭಿನಂದನೆ
Published on

ಹಾಸನ: ಪ್ರಜಾಪ್ರಭುತ್ವ ಪರಿಕಲ್ಪನೆಯ ರೂವಾರಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆಂದು ಜಿಲ್ಲಾ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಬಿ.ಪಿ.ಐಸಾಮಿಗೌಡ ಅವರು ಹೇಳಿದರು.
12ನೇ ಶತಮಾನದಲ್ಲಿ ಸಾಮಾಜಿಕ ಸುಧಾರಣೆಗಾಗಿ ಶ್ರಮಿಸಿದ ಬಸವಣ್ಣ ಅವರು ಜಾತಿ, ಧರ್ಮಗಳ ನಡುವಿನ ತಾರತಮ್ಯ ಅಳಿದು ಹಾಕಲು ಶ್ರಮವಹಿಸಿದರು. ವಚನ ಸಾಹಿತ್ಯದ ಮೂಲಕ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದರು. ಬಸವಣ್ಣ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಗುವುದಾಗಿ ಹೇಳಿರುವುದು ಸಮಾಜಕ್ಕೆ ಖುಷಿ ತಂದಿದೆ ಎಂದು ಮಂಗಳವಾರ ಸುದ್ದಿಗೋಷ್ಠಯಲ್ಲಿ ತೀಳಿಸಿದರು.
ಅದೇ ರೀತಿ ಶಿವಮೊಗ್ಗದ ಪ್ರೀಡಂ ಪಾರ್ಕಗೆ ಅಲ್ಲಮ ಪ್ರಭು ದೇವರ ಹೆಸರನ್ನು ಇಡಲು ಹಾಗು ಕಿತ್ತೂರು ರಾಣಿ ಚನ್ನಮ್ಮ ಅವರ ತಾಲ್ಲೂಕು ಘೋಷಣೆಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
ಹಿಂದೂಪರ ಸಂಘಟನೆಗಳ ಅವಿರತ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಇದು ಕೋಟ್ಯಾಂತರ ಭಾರತೀಯರ ಕನಸು ಸಾಕಾರಗೊಂಡ ದಿನವಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸುತ್ತೇವೆ. ಶ್ರೀರಾಮ ಮಂದಿರ ಉದ್ಘಾಟನೆ ಹಾಗು ತುಮಕೂರು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಅಂಗವಾಗಿ ನಗರದ ಅರಳೆಪೇಟೆಯ ಬಸವೇಶ್ವರ ದೇವಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರಾದ ಮಿಥುನ್,ವಿಶಾಲ್ ಐಗೂರ್,ನಾಗೇಶ್,ನೀಲಕಂಠಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net