ರಾಜ್ಯ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್‌ಶಿಪ್ : ಮೈಸೂರಿನ ಸಿಗ್ನೇಚರ್ ಡ್ಯಾನ್ಸ್ ಕಂಪನಿ ಸಮಗ್ರ ಪ್ರಶಸ್ತಿ

20221225233329_IMG_9441
Published on

ಮೈಸೂರು: ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ವತಿಯಿಂದ ನಗರದ ಎಂಎಂಸಿ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಜ್ಯ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಸಿಗ್ನೇಚರ್ ಡ್ಯಾನ್ಸ್ ಕಂಪನಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.

14 ಚಿನ್ನದ ಪದಕ 3 ಬೆಳ್ಳಿ ಪದಕ ಒಂದು ಕಂಚಿನ ಪದಕ ಸೇರಿದಂತೆ ಒಟ್ಟು 18 ಪದಕಗಳನ್ನು ಪಡೆದುಕೊಂಡಿತು. ಹರ್ಷಿತ್ ಕುಮಾರ್ ಮೂರು ಚಿನ್ನದ ಪದಕ, ಸನಿಹ, ಸಿಂಚನ, ನಿಶ್ಚಲ್, ಮಾನ್ಯ, ಚರಿತ್, ಧೀರಜ್ ತಲಾ ಎರಡು ಚಿನ್ನದ ಪದಕ ಪಡೆದರು.

ಪದಕ ವಿಜೇತರು ಫೆಬ್ರವರಿ ತಿಂಗಳಲ್ಲಿ ತಮಿಳುನಾಡಿನ ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net