ರಾಜ್ಯಕ್ಕೆ ಮತ್ತೆ ಚೊಂಬು

abbayya prasad
Published on

ಹುಬ್ಬಳ್ಳಿ: ಕೇಂದ್ರದ ಬಜೆಟ್ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಮತ್ತೆ ರಾಜ್ಯಕ್ಕೆ ಕೇಂದ್ರದಿಂದ ಚೊಂಬು ಸಿಕ್ಕಿದೆ ಎಂದು ಸ್ಲಂ ಬೋರ್ಡ್ ಅಧ್ಯಕ್ಷರು, ಶಾಸಕ ಪ್ರಸಾದ ಅಬ್ಬಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಜೆಟ್ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದಲ್ಲಿ ತೆರಿಗೆ ಪಾವತಿಸುವಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇಷ್ಟಿದ್ದರೂ ಕೂಡ ರಾಜ್ಯಕ್ಕೆ ಬಜೆಟ್ ದಿಂದ ಯಾವುದೇ ಲಾಭ ಆಗಿಲ್ಲ. ಬಿಹಾರದಲ್ಲಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ವಿಶೇಷ ಅನುದಾನ ನೀಡಿದ್ದಾರೆ. ಇದೊಂದು ಬಿಹಾರ ಬಜೆಟ್ ಎಂಬುವಂತಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿನ ನಗರ ಹಾಗೂ ಗ್ರಾಮೀಣ ವಸತಿ ಯೋಜನೆಗಳಿಗೆ ಕೇಂದ್ರದ ವಂತಿಕೆಯನ್ನು ಹೆಚ್ಚು ಮಾಡಿ ಎಂದು ಮನವಿ ಮಾಡಿಕೊಂಡರು ಕ್ಯಾರೆ ಎಂದಿಲ್ಲ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ನೀಡುವ ಗೌರವಧನದ ಪಾಲು ಹೆಚ್ಚು ಮಾಡಿಲ್ಲ . ಉತ್ಪಾದನೆ, ರಫ್ತು, ಉದ್ಯೋಗ ಸೃಷ್ಟಿ, ಬೆಲೆ ಏರಿಕೆ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಈ ಬಜೆಟ್ ಬಡವರ ವಿರೋಧಿ ಬಜೆಟ್ ಆಗಿದ್ದು ಶ್ರೀಮಂತರ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net