ರಾಜ್ಯದ ಹೊಸ ರೈಲು ಮಾರ್ಗ ಕಾಮಗಾರಿ ಚುರುಕು

bkt-14-4
ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿಯಲ್ಲಿ ಸಚಿವ ವಿ.ಸೋಮಣ್ಣ ಕಾಮಗಾರಿ ವೀಕ್ಷಣೆ ಮಾಡಿದರು. ಸಂಸದ ಪಿ.ಸಿ.ಗದ್ದಿಗೌಡರ, ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ ಇತರರು ಇದ್ದರು.
Published on

ಬಾಗಲಕೋಟೆ: ಬಾಗಲಕೋಟೆ-ಕುಡಚಿ ರೈಲು ಮಾರ್ಗ ಯೋಜನೆಯ ಕಾಮಗಾರಿ ವಿಶೇಷ ರೈಲಿನಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳವಾರ ವೀಕ್ಷಣೆ ಮಾಡಿದರು. ಅಽಕಾರಿಗಳು ಯೋಜನೆ ಪ್ರಗತಿ ಕುರಿತು ವೀಕ್ಷಣೆ ಮಾಡಿದರು.

ಮಂಗಳವಾರ ವಿಶೇಷ ರೈಲಿನಲ್ಲಿ ಕುಡಚಿ ರೈಲು ಮಾರ್ಗದ ಬಾಗಲಕೋಟೆಯಿಂದ ಖಜ್ಜಿಡೋಣಿವರೆಗಿನ ಹೊಸ ಮಾರ್ಗದಲ್ಲಿ ಸಂಚರಿಸಿ ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಾಗಲಕೋಟೆ-ಕುಡಚಿ ರೈಲು ಮಾರ್ಗ ಯೋಜನೆ ೨೦೨೭ರ ಹೊತ್ತಿಗೆ ಪೂರ್ಣಗೊಳಿಸಲಾಗುವುದು. ೨೦೧೦-೧೧ರಲ್ಲಿ ೧೬೫೦ ಕೋಟಿ ರೂ.ಗಳೊಂದಿಗೆ ಯೋಜನೆ ಆರಂಭಗೊAಡಿದೆ. ಈ ಭಾಗದಲ್ಲಿ ಹೊಸ ರೈಲು ಮಾರ್ಗ ಮನ್ವಂತರ ಸೃಷ್ಠಿಸಲಿದೆ. ಬ್ರಿಟಿಷರ ಅವಽ ನಂತರ ಈ ಭಾಗದಲ್ಲಿ ರೈಲ್ವೆ ಯೋಜನೆಗಳಿಗೆ ಅವಕಾಶವೇ ಇರಲಿಲ್ಲ ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಕಲ್ಯಾಣ ಹಾಗೂ ಕಿತ್ತೂರ ಕರ್ನಾಟಕದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ ಎಂದು ತಿಳಿಸಿದರು.

ಖಜ್ಜಿಡೋಣಿಯಿಂದ ಲೋಕಾಪುರದವರೆಗೆ ೭ ಕಿ.ಮೀ. ಕಾಮಗಾರಿ ಮುಕ್ತಾಯಗೊಂಡಿದೆ. ರೈಲು ಮಾರ್ಗ ಸುರಕ್ಷತಾ ಪರಿಶೀಲನೆ ಕಾರ್ಯಾರಂಭಗೊಳ್ಳಲಿದೆ. ಮಾರ್ಚ್ತಿಂಗಳಿನಿAದ ಗೂಡ್ಸ್ ಹಾಗೂ ಪ್ಯಾಸೆಂಜರ್ ವಾಹನಗಳ ಸಂಚಾರ ಆರಂಭವಾಗಲಿದೆ. ಈ ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಸಂಚಾರ ಆರಂಭದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಸಂಚಾರ ನಡೆಸುವ ಬಗ್ಗೆ ಚರ್ಚಿಸಲಾಗಿದ್ದು, ಮಾರ್ಚ್ ವೇಳೆಗೆ ಆರಂಭವಾಗಲಿದೆ ಎಂದು ತಿಳಿಸಿದರು.

ಬಾಗಲಕೋಟೆ ಕುಡಚಿ ಮಾರ್ಗಕ್ಕಾಗಿ ೨೦೨೪-೨೦೨೫ ಅವಽಯಲ್ಲಿ ೧೫೦ ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಲೋಕಾಪುರದಿಂದ ಯಾದವಾಡವರೆಗೆ ೨೭ ಕಿ.ಮೀ. ಕಾಮಗಾರಿಯನ್ನೂ ಬರುವ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳಿಸಲಾಗುತ್ತದೆ. ಇಡೀ ಮಾರ್ಗದ ಶೇ.೩೦ ರಿಂದ ಶೇ.೩೫ ಕಾಮಗಾರಿ ಪೂರ್ಣಗೊಂಡಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಶೇ.೫೦ ಸಹಭಾಗಿತ್ವದಲ್ಲಿ ಯೋಜನೆ ಕೈಗೊಳ್ಳಲಾಗಿದೆ. ರಾಜ್ಯದ ಹೊಸ ರೈಲು ಮಾರ್ಗಗಳ ಕಾಮಗಾರಿಗಳು ಚುರುಕು ಪಡೆದುಕೊಂಡಿವೆ ಎಂದು ಹೇಳಿದರು.

ಗದಗ-ಯಲವಿಗಿ ಮಾರ್ಗದ ರೈಲ್ವೆ ಯೋಜನೆಗಾಗಿ ಡಿಪಿಆರ್ ಸಿದ್ಧಗೊಳ್ಳುತ್ತಿದ್ದು, ಅದಕ್ಕೂ ೧೦೦ ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಒಟ್ಟು ೧೧ ರೈಲ್ವೆ ಯೋಜನೆಗಳಿಗಾಗಿ ಕೇಂದ್ರ ಸರ್ಕಾರ ೨೯ ಸಾವಿರ ಕೋಟಿ ರೂ.ಗಳನ್ನು ವಿನಿಯೋಗ ಮಾಡಿದ್ದು, ಯೋಜನೆ ಪೂರ್ಣಗೊಂಡ ನಂತರ ಹೊಸ ಬದಲಾವಣೆ ಸೃಷ್ಟಿಯಾಗಲಿದೆ ಎಂದರು.

ಸಂಸದ ಪಿ.ಸಿ.ಗದ್ದಿಗೌಡರ, ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ, ಜಿಲ್ಲಾಽಕಾರಿ ಜಾನಕಿ ಕೆ.ಎಂ., ಉಪವಿಭಾಗಾಽಕಾರಿಗಳಾದ ಸಂತೋಷ ಜಗಲಾಸರ್, ಶ್ವೇತಾ ಬೀಡಿಕರ್, ರೈಲ್ವೆ ಇಲಾಖೆ ಹಿರಿಯ ಅಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net