ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಗೊಳಿಸಿ

Ahinda
filter: 101; fileterIntensity: 0.8; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;
Published on

ಚಿತ್ರದುರ್ಗ: ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ವಿಳಂಬ ಮಾಡದೆ, ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಅಹಿಂದ ಚಳವಳಿ ಜಿಲ್ಲಾ ಮುಖ್ಯ ಸಂಚಾಲಕ ಕೆಂಚಪ್ಪ ಸಿಎಂಗೆ ಒತ್ತಾಯಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಚ್.ಕಾಂತರಾಜ್ ನೇತೃತ್ವದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ಜಾತಿ ಜನಗಣತಿ ವರದಿ ಬಿಡುಗಡೆ ಮಾಡಲು ಮುಂದಾಗಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಲೇಖಕ ಆನಂದ್‌ಕುಮಾರ್ ಮಾತನಾಡಿ, ಜಾತಿ ಜನಗಣತಿ ವರದಿ ಬಿಡುಗಡೆಯಿಂದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸೌಲಭ್ಯ ದೊರೆಯಲಿದೆ. ಇದರಿಂದ ಯಾರಿಗೂ ಅನ್ಯಾಯವಾಗದು ಎಂದರು.

ಒಳಮೀಸಲಾತಿ ಜಾರಿಗೊಳಿಸುವ ಮೂಲಕ ಅಹಿಂದ ವರ್ಗದವರನ್ನು ರಾಜಕೀಯ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮುಖ್ಯವಾಹಿನಿಗೆ ತರಲು ರಾಜ್ಯ ಸರ್ಕಾರ ತ್ವರಿತ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗದ ಜಿಲ್ಲಾ ಮುಖ್ಯ ಸಂಚಾಲಕ ಸನಾವುಲ್ಲಾ, ಮುಖಂಡರಾದ ತಿಪ್ಪೇಸ್ವಾಮಿ, ಅವಿನಾಶ್, ಸುರೇಂದ್ರ, ಸುಬ್ಬಣ್ಣ ನಾಗರಾಜ, ವಿನೋದ್ ಭದ್ರಾವತಿ, ಜ್ಯೋತಿಲಕ್ಷ್ಮಿ ಸೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net