ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ

Neha Hiremat
Published on

ಕಲಬುರಗಿ: ಹುಬ್ಬಳ್ಳಿಯ ಬಿವಿಬಿ ಕಾಲೇಜï ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಕೊಲೆ ಖಂಡನೀಯ. ತಪ್ಪಿತಸ್ಥ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಮಾನವ ಹಕ್ಕುಗಳ ಸಂರP್ಷÀಣಾ ಸಂಸ್ಥೆ ಮಹಿಳಾ ಘಟಕದ ಅಧ್ಯಕ್ಷೆ ಸುಮಾ ಕವಲ್ದಾರ ಸರ್ಕಾರಕ್ಕೆ ಒತ್ತಾಯಿಸಿದರು. ಇತ್ತೀಚೆಗೆ ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ, ಶೋಷಣೆ, ಕೊಲೆಗಳು ಹೆಚ್ಚುತ್ತಿವೆ. ಭದ್ರತೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಎಂಸಿಎ ಓದುತ್ತಿದ್ದ ನೇಹಾ ಹಿರೇಮಠಳನ್ನು ಚಾಕುವಿನಿಂದ ಹತ್ಯೆಗೈದಿರುವುದು ಖಂಡನೀಯ. ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು. ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು. ಜಯಶ್ರೀ ವಿಶ್ವಕರ್ಮ, ಅನುರಾಧ ಹೂಗಾರ, ಜ್ಯೋತಿ ವಿಶ್ವಕರ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net