

ಕಲಬುರಗಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಅತಿಯಾದ ಅಲ್ಪಸಂಖ್ಯಾತ ಓಲೈಕೆಯಿಂದ ಟಿಪ್ಪು ಸಂಸ್ಕೃತಿ ತರಲಾಗಿದ್ದು, ಏನೇ ಮಾಡಿದರೂ ಏನೂ ಆಗಲ್ಲ ಎನ್ನುವ ಮನಸ್ಥಿತಿ ಸೃಷ್ಟಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿಂದೆ ಅಧಿಕಾರದಲ್ಲಿದ್ದಾಗ ಹಿಂದುಗಳ ಮೇಲೆ ದೌರ್ಜನ್ಯ ನಡೆಸಿದ್ದರಿಂದ ಅಧಿಕಾರ ಕಳೆದುಕೊಂಡಿತ್ತು. ಇದೀಗ ಅದೇ ತಪ್ಪು ಮರುಕಳಿಸುತ್ತಿದೆ. ಬೆಳಗಾವಿಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ನಡೆಯಿತು, ಹಾವೇರಿಯಲ್ಲಿ ಗ್ಯಾಂಗ್‌ರೇಪ್ ಆಯಿತು, ವಿಧಾನಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್, ರಾಮೇಶ್ವರಂ ಕೆಫೆ ಮೇಲೆ ಬಾಂಬ್ ದಾಳಿ ನಡೆದಿದ್ದರೂ, ಯಾವುದೇ ಕಠಿಣ ಕ್ರಮ ಒಂದೂ ಪ್ರಕರಣದಲ್ಲಿ ಆಗಿಲ್ಲ ಎಂದು ಹೇಳಿದರು.
ಕಾನೂನು ಸುವ್ಯವಸ್ಥೆ ಹಳಿ ತಪ್ಪಿದ್ದು, ಬ್ರಾÈಂಡ್ ಬೆಂಗಳೂರು ಮಾಡುತ್ತೇನೆ ಎಂದವರು ಬಾಂಬ್ ಬೆಂಗಳೂರು ಮಾಡಿದ್ದಾರೆ. ತನಿಖೆ ಆಗದೆ, ಆರೋಪಿ ಯಾರು ಎನ್ನುವುದು ಪತ್ತೆ ಆಗದೆ ಬ್ರದರ್ ಎನ್ನುತ್ತಿದ್ದಾರೆ. ಡಿ.ಕೆ.ಶಿವಕುಮಾರ ಪಾಕಿಸ್ತಾನ ಜಿಂದಾಬಾದ್ ಕೂಗೇ ಇಲ್ಲ ಎಂದಿದ್ದರು, ರಾಮೇಶ್ವರಂ ಕೆಫೆ ಮೇಲೆ ಬಾಂಬ್ ದಾಳಿ ವ್ಯವಹಾರ ದ್ವೇಷ ಅಂತಾ ಮೊದಲೇ ಹೇಳಿದ್ದರು. ಇದೀಗ ಭಯೋತ್ಪಾದಕ ಘಟನೆ ಎನ್ನುತ್ತಿದ್ದಾರೆ. ಇದೀಗ ಸತ್ಯ ಹೊರಬಂದಿದೆ. ಆರು ದಿನದಲ್ಲಿ ಎಫ್‌ಎಸ್‌ಎಲ್ ವರದಿ ಎಂದರೂ, ಆಗಿಲ್ಲ. ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಬೇಜವಾಬ್ದಾರಿ ಸರ್ಕಾರವನ್ನು ವಜಾ ಮಾಡಲು ರಾಜ್ಯಪಾಲರಿಗೆ ದೂರು ನೀಡಲಾಗಿದೆ ಎಂದು ಕಿಡಿ ಕಾರಿದರು.
ಕಲಬುರಗಿಯಲ್ಲಿ ಇಬ್ಬರು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ರಾಜಕೀಯ ದ್ವೇಷದಿಂದ ಹತ್ಯೆ ನಡೆದಿದ್ದು, ತನಿಖೆ ನಡೆಯುತ್ತಿದೆ. ಪುಂಡ ಪೋಕರಿಗಳು ಬೀದಿಯಲ್ಲಿ ಬಟನ್ ಬಿಚ್ಚಿ ಓಡಾಡುತ್ತಿದ್ದಾರೆ. ಹಿಂದು ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಮಂಗಳೂರು, ಉಡುಪಿಯಲ್ಲಿ ಗಡಿಪಾರು ಮಾಡಲಾಗುತ್ತಿದೆ. ನಿರಂತರ ಕೃತ್ಯಗಳು ಖಂಡನೀಯ. ಹತ್ಯೆಗೀಡಾದ ಕಾರ್ಯಕರ್ತರ ಕುಟುಂಬದವರಿಗೆ ಸಾಂತ್ವನ ಹೇಳಲು ಬಂದಿz್ದೆÃನೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ತಾಯಿ ಅಂತ್ಯಸAಸ್ಕಾರದ ಬಗ್ಗೆ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ ಯಾದವ ಹೇಳಿಕೆಗೆ ಪ್ರತಿಕ್ರಿಯಿಸಿದ ಅಶೋಕ, ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ. ಬಿಹಾರದಲ್ಲಿ ಸರ್ಕಾರ ಬಿದ್ದಿದೆ. ದಿಕ್ಕು ದಿಸೆ ಇಲ್ಲದೆ ಮಾತನಾಡುತ್ತಿದ್ದಾರೆ. ಶವಸಂಸ್ಕಾರ ಮೋದಿ ಅವರ ಕುಟುಂಬದ ನಿರ್ಧಾರ. ವೈಯಕ್ತಿಕ ನಿಂದನೆ ಸರಿಯಲ್ಲ ಎಂದು ಹೇಳಿದರು.
ಶಾಸಕ ಬಸವರಾಜ ಮತ್ತಿಮಡು, ಎಂಎಲ್‌ಸಿ ಸುನೀಲ ವಲ್ಯಾಪುರೆ, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಸಂತೋಷ ಹಾದಿಮನಿ, ಬಾಬುರಾವ ಹಾಗರಗುಂಡಗಿ ಇತರರಿದ್ದರು.