ಕೋಲಾರ: ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರವು ದೇಶದ ಅತಿದೊಡ್ಡ ಭ್ರಷ್ಟ ಸರ್ಕಾರವಾಗಿದೆ. ದೇಶದಲ್ಲಿ ಇಷ್ಟು ಅಗೌರವವಾಗಿ ಯಾವುದೇ ಸರ್ಕಾರ ನಡೆದುಕೊಂಡಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೇವಾಲ ಕಿಡಿಕಾರಿದರು.
ನಗರದ ಕಾಬಾ ಪ್ಲಾಜಾದಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಗೃಹಲ್ಮ ಮತ್ತು ಭಾಗ್ಯಜ್ಯೋತಿ ಯೋಜನೆಯ ಜಿಲ್ಲಾಮಟ್ಟದ ಲೋಕಾರ್ಪಣೆ ಕಾರ್ಯಕ
ಉದ್ಘಾಟಿಸಿ ಮಾತನಾಡಿದರು.
ಶೇ.40 ಕಮಿಷನ್ ಪಡೆಯುವುದು ರಾಜ್ಯದಲ್ಲಿ ಮಾತ್ರ ಇದೆ. ಇಲಾಖೆಗಳ ಸಿಬ್ಬಂದಿಯಿಂದ ಹಿಡಿದು ಮುಖ್ಯಮಂತ್ರಿವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಬಗ್ಗೆ ಲಿಖಿತ ದೂರು ನೀಡಿದವರು ಕಾಂಗ್ರೆಸ್ನವರಲ್ಲ, ಗುತ್ತಿಗೆದಾರರ ಸಂದವರು. ಶೇ.40 ಕಮಿಷನ್ ನೀಡದಿದ್ದರೆ ಖಾಸಗಿ ಶಾಲೆಗೆ ಯಾವುದೇ ಅನುಕೂಲ ನೀಡುವುದಿಲ್ಲವೆಂದು, ಶಾಲೆಗಳ ಆಡಳಿತ ಮಂಡಳಿಯವರು ಆರೋಪಿಸಿದ್ದಾರೆ ಎಂದರು.
ಎಲ್ಲ ಹುದ್ದೆಗಳನ್ನೂ ಮಾರಾಟಕ್ಕೀಡಲಾಗಿದೆ. ಇಷ್ಟಾದರೂ ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಮಂತ್ರಿಯಾಗಲಿ, ಮುಖ್ಯಮಂತ್ರಿಯಾಗಲಿ ಕ್ರಮ ಕೈಗೊಂಡಿಲ್ಲ. ಮಾಧ್ಯಮಗಳಿಗೆ ಪ್ರತಿಕ್ರಿಯಿಸುವ ಧೈರ್ಯವೂ ಇಲ್ಲ ಎಂದರು.
ಪ್ರತಿ ಮನೆ, ಕುಟುಂಬಕ್ಕೂ 200 ಯೂನಿಟ್ ವಿದ್ಯುತ್ ಉಚಿತ ಹಾಗೂ ಮನೆ ನಿರ್ವಹಣೆಗಾಗಿ ಪ್ರತಿ ಮಹಿಳೆಯ ಖಾತೆಗೆ ನೇರವಾಗಿ 2,000 ರೂಪಾಯಿ ವರ್ಗಾವಣೆ ಮಾಡಲಾಗುವುದು. ಹೀಗಾಗಿ 2 ಗ್ಯಾರಂಟಿ ಕಾರ್ಯಕ್ರಮಗಳ ಕಾರ್ಡ್ ನೀಡಲಾಗುವುದು. ಕಾರ್ಡ್ ಇರುವ ಮನೆಗಳಿಗೆ ಸೌಲಭ್ಯಗಳನ್ನು ತಲುಪಿಸುವುದು
ನಮ್ಮ ಜವಾಬ್ದಾರಿ ಎಂದರು.
ಎಲ್ಲರೂ ಸಮಾನವಾಗಿ ಬದುಕಬೇಕು: ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಈ ಹಿಂದೆ ನೀಡಿದ್ದಕ್ಕಿಂತಲೂ ಹೆಚ್ಚಿನ ಯೋಜನೆಗಳನ್ನು ಸದ್ಯದಲ್ಲೇ ೂಷಿಸಲಾಗುವುದು. ದೇಶದಲ್ಲಿ ಕೋಮು ಗಲಭೆ ತೊಲಗಿ ಎಲ್ಲರೂ ಸಮಾನವಾಗಿ ಬಾಳಿ ಬದುಕಿ ಬಾಳಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದರು.
ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಎಂಎಲ್ಸಿಗಳಾದ ನಜೀರ್ ಅಹಮದ್, ಎಂ.ಎಲ್.ಅನಿಲ್ಕುಮಾರ್ ಮಾತನಾಡಿದರು.
ಕಾಂಗ್ರೆಸ್ ಮಹಿಳಾ ಟಕದ ರಾಜ್ಯಾಧ್ಯೆ ಪುಷ್ಪಾ ಅಮರನಾಥ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಜಿಲ್ಲಾಧ್ಯಕ್ಷ ಲ್ಮನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಜಿಲ್ಲಾ ವಕ್ತಾರ ಎಲ್.ಎ.ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ಬಾಬು,
ರತ್ನಮ್ಮ, ಯಲ್ಲಪ್ಪ ಇದ್ದರು.
ಕೆ.ಎಚ್. ಪರವಾಗಿ ನಂಜೇಗೌಡ ಬ್ಯಾಟಿಂಗ್: ಮಾಲೂರು ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಇತಿಹಾಸವಿದೆ. ಕಾರಣಾಂತರಗಳಿಂದ ಹೆಚ್ಚು ಕಡಿಮೆ ಆಗಿದೆ. ಮುಂದೆ ಆ ರೀತಿ ಆಗದಂತೆ ನೋಡಿಕೊಳ್ಳೋಣ. ಮೊದಲು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಶಾಸಕರನ್ನು ಗೆಲ್ಲಿಸಿಕೊಂಡು, ಆ ನಂತರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಂಸದರನ್ನು ಗೆಲ್ಲಿಸಿಕೊಳ್ಳೋಣ ಎಂದು ಕೆ.ಎಚ್.ಮುನಿಯಪ್ಪ ಪರವಾಗಿ ಬ್ಯಾಟಿಂಗ್ ಮಾಡಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ$ವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಜತೆಗೆ ಜಿಲ್ಲೆಯಲ್ಲೂ 6ಕ್ಕೆ 6 ಸ್ಥಾನಗಳನ್ನು ಗೆಲ್ಲಿಸಲು ಈ 3 ತಿಂಗಳು ಕೆಲಸ ಮಾಡಬೇಕು. ಬಿಜೆಪಿ ಸರ್ಕಾರದ ವೈಫಲ್ಯಗಳ ಜತೆಗೆ ಹಿಂದಿನ ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ತಿಳಿಸಿಕೊಡಬೇಕು ಎಂದರು.
ಸಾಮಾನ್ಯರ ಗತಿಯೇನು? ಗದಗ ಜಿಲ್ಲೆಯ ಮಠವೊಂದರ ಸ್ವಾಮೀಜಿ ಬಳಿ ಶೇ.30 ಕಮಿಷನ್ ಕೇಳಿದ್ದಾರೆ. ಮಠಾಧೀಶರ ವಿಚಾರದಲ್ಲೂ ಕಮಿಷನ್ ಬಿಟ್ಟಿಲ್ಲ. ಆದರೆ ಅವರಿಗೆ ಶೇ.10 ರಿಯಾಯಿತಿ ನೀಡಿದ್ದಾರೆ ಎಂದು ಲೇವಡಿ ಮಾಡಿದರು. ಹಣ ಕೊಟ್ಟರೆ ಸಿಎಂ ಸ್ಥಾನವೂ ಸಿಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಆರೋಪಿಸಿದ್ದಾರೆ. ಶಿವಮೊಗ್ಗದ ಸಂತೋಷ್ ಪಾಟೀಲ್, ತುಮಕೂರು ರಾಜೇಂದ್ರ ಎಂಬ ಗುತ್ತಿಗೆದಾರರು ಕಮಿಷನ್ ನೀಡಲು ಶಕ್ತಿ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡರು. ಬೆಂಗಳೂರಿನಲ್ಲಿರುವ ಗುತ್ತಿಗೆದಾರರೊಬ್ಬ ಗನ್ನಲ್ಲಿ ಶೂಟ್ ಮಾಡಿಕೊಂಡಿದ್ದಾರೆ. ಗುತ್ತಿಗೆದಾರರಿಗೆ ಇಂತಹ ಪರಿಸ್ಥಿತಿ ಇದ್ದರೆ ಇನ್ನು ರಾಜ್ಯದ ಸಾಮಾನ್ಯ ಜನರ ಗತಿಯೇನು ಎಂದು ಪ್ರಶ್ನಿಸಿ, 90 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಗುತ್ತಿಗೆದಾರರು 8 ಮಂತ್ರಿಗಳು, 17 ಶಾಸಕರ ಮೇಲೆ ಮಾಡಿರುವ ಆರೋಪದ ದಾಖಲೆ ಇರುವುದಾಗಿ ತಿಳಿಸಿದರು.
ಶಾಸಕಿಯಿಂದ ಅನುವಾದ: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹಿಂದಿ ಮತ್ತು ಇಂಗ್ಲಿಷ್ನ ಭಾಷಣವನ್ನು ಕೆಜಿಎಫ್ ಶಾಸಕಿ ಎಂ.ರೂಪಕಲಾ ಅವರು ಕನ್ನಡಕ್ಕೆ ಅನುವಾದಿಸಿದರು.
ಕೋಲಾರ: ಒಂದು ತಿಂಗಳಲ್ಲಿ ಚುನಾವಣೆ ೂಷಣೆಯಾಗಲಿದ್ದು, ರಾಜ್ಯ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಹೊಸದಾಗಿ ಹತ್ತು ಸಾವಿರ ಕೋಟಿಗೂ ಅಧಿಕ ಮೊತ್ತದ ಟೆಂಡರ್ ನೀಡುತ್ತಿದೆ. ಮತ್ತೇ ಶೇ.40 ಕಮಿಷನ್ ಪಡೆಯಲು ಕೃತ್ಯಕ್ಕೆ ಮುಂದಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಹಣವನ್ನು ಬಿಜೆಪಿ ಸರ್ಕಾರ ಮತ್ತೆ ಲೂಟಿ ಮಾಡಲು ಕೈ ಹಾಕಿದೆ. ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಎಲ್ಲ ಟೆಂಡರ್ ರದ್ದುಗೊಳಿಸಿ, ತನಿಖೆ ನಡೆಸಲಾಗುವುದು. ತಪ್ಪು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಎಚ್ಚರಿಸಿದರು. ಬಿಜೆಪಿ ಸರ್ಕಾರ ನಿತ್ಯ ಒಂದಿಲ್ಲೊಂದು ಭ್ರಷ್ಟಾಚಾರದಲ್ಲಿ ತೊಡಗಿದೆ. ವಿವಿಧ ಕಾಮಗಾರಿ ನಡೆಸಿದ ಸಂಬಂಧ 20 ಸಾವಿರ ಕೋಟಿ ರೂ.ಬಿಲ್ ಪಾವತಿಸಿಲ್ಲವೆಂದು ಗುತ್ತಿಗೆದಾರರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಕೇವಲ 30 ದಿನ ಮಾತ್ರ ಈ ಸರ್ಕಾರ ಇರಲಿದ್ದು, ಇದರ ನೂತನ ಸೂತ್ರವೆಂದರೆ ಹಣ ಪಾವತಿಸಿ ಹಣ ವಾಪಸ್ ಪಡೆಯುವುದು ಎಂದರು. ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ಷಾ, ಹಿರಿಯ ನಾಯಕ ಯಡಿಯೂರಪ್ಪ ಅವರನ್ನು ವೇದಿಕೆಯಲ್ಲಿ ಯಾವ ರೀತಿ ಅವಮಾನ ಮಾಡಿದರೆಂದು ತಾವೆಲ್ಲ ಗಮನಿಸಿದ್ದೀರಿ. ರಾಜಕೀಯವಾಗಿ ನಾವು ಯಡಿಯೂರಪ್ಪ ಅವರನ್ನು ವಿರೋಧಿಸುತ್ತೇವೆ. ಆದರೆ, ತಂದೆ ವಯಸ್ಸಿನ ಯಡಿಯೂರಪ್ಪ ಅವರನ್ನು ಬಿಜೆಪಿ ನಡೆಸಿಕೊಳ್ಳುವ ರೀತಿಯೇ ಇದು? ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ರಾಜ್ಯಕ್ಕೆ ಎಷ್ಟೇ ಬಾರಿ ಬಂದರೂ ನಮಗೆ ತೊಂದರೆ ಇಲ್ಲ. ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂಬುದರ ಬಗ್ಗೆ ಜನರಿಗೆ ಉತ್ತರಿಸಬೇಕು. ಪ್ರವಾಹ ಸಂದರ್ಭದಲ್ಲಿ ಅನುದಾನ ನೀಡಲಿಲ್ಲ, ರಾಜ್ಯಕ್ಕೆ ಬರಬೇಕಿರುವ ಜಿಎಸ್ಟಿ ಪಾಲುದಾರಿಕೆ ನೀಡಿಲ್ಲ. ಯಾವುದೇ ಹೊಸ ಯೋಜನೆ ೂಷಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.